Join The Telegram | Join The WhatsApp |
ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿ ಅಗಲಿಕೆಗೆ ನಿಜಗುಣಾನಂದ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.
ಸಿದ್ದೇಶ್ವರ ಶ್ರೀಗಳನ್ನು ಕಳೆದುಕೊಂಡಿರುವುದು ತುಂಬಲಾರದ ನಷ್ಟವಾಗಿದೆ ಎಂದು ನಿಜಗುಣಾನಂದ ಸ್ವಾಮೀಜಿ ಭಾವುಕರಾಗಿದ್ದಾರೆ.
ಸಿದ್ದೇಶ್ವರ ಸ್ವಾಮೀಜಿ ಜೊತೆ 40 ವರ್ಷಗಳಿಂದ ಒಡನಾಟ ಇದೆ. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ ಮಾರ್ಗದರ್ಶವಾಗಿದ್ದರು. ಡಿಸೆಂಬರ್ 21 ರಂದು ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದ್ದೆ. ಈ ವೇಳೆ ಸಿದ್ದೇಶ್ವರ ಶ್ರೀಗಳಿಗೆ ನನ್ನಿಂದ ಹಾಡು ಕೇಳುವ ಸ್ವಭಾವವಿತ್ತು. ಆಶ್ರಮಕ್ಕೆ ಹೋದಾಗ ಶ್ರೀಗಳು ನನ್ನ ಹಾಡುಗಳನ್ನು ಅಲಿಸುತ್ತಿದೆ. ಕೃಷಿ ಸಂಸ್ಕೃತಿ ಉಳಿಯಬೇಕೆಂಬುವುದು ಶ್ರೀಗಳ ಆಸೆಯಾಗಿದೆ. ಗುರು ಅನ್ನುವುದು ಸಮಾಜದ ಸ್ವತ್ತು ಎಂದು ಹೇಳಿದ್ದಾರೆ.
ಇನ್ನು ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್‌ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಸಾಗರೋಪಾದಿಯಲ್ಲಿ ಬೆಳಂಬೆಳಗ್ಗೆ ಭಕ್ತರ ದಂಡು ಹರಿದು ಬರುತ್ತಿದೆ.
Join The Telegram | Join The WhatsApp |