ಪಾಟ್ನಾ : ಬಿಹಾರದಲ್ಲಿ ಸತತ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಇಂದು ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಿಹಾರದಲ್ಲಿ ಇಂದು ನೂತನ ಸರ್ಕಾರ ಪದಗ್ರಹಣ ಸಮಾರಂಭ ನಡೆಯುತ್ತಿದ್ದು, ಬಿಹಾರದ ಪಾಟ್ನಾದ ಗಾಂಧಿ ಮೈದಾನದಲ್ಲಿ 10ನೇ ಬಾರಿ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಿಹಾರದಲ್ಲಿ ಎನ್‌ಡಿಎ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುತ್ತಿರುವ ಪಾಟ್ನಾದ ಗಾಂಧಿ ಮೈದಾನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಯುಪಿ ಸಿಎಂ ಯೋಗಿ ಆದಿತ್ಯನಾಥ್, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು, ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಮತ್ತು ಇತರರು ಸೇರಿದಂತೆ ಹಿರಿಯ ಎನ್‌ಡಿಎ ನಾಯಕರು ಭಾಗಿಯಾಗಿದ್ದಾರೆ.




