ಬೆಂಗಳೂರು : ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಯ ಯಾವುದೇ ಬಸ್ ಪಾಸ್ ದರವನ್ನು ಹೆಚ್ಚಳ ಮಾಡುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ಪ್ರಮಾಣದರ ಶೇ.15 ರಷ್ಟು ಏರಿಕೆ ಬೆನ್ನಲ್ಲೇ ಬಸ್ ಪಾಸ್ ದರವೂ ಏರಿಕೆಯಾಗಲಿದೆ ಎನ್ನಲಾಗಿತ್ತು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಆರ್ಥಿಕ ಹೊರೆ ಕಡಿಮೆ ಮಾಡಿಕೊಳ್ಳುವ ಉದ್ದೇಶದಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ ಎಂದರು.
ಬಿಎಂಟಿಸಿ, ಕೆಎಸ್ ಆರ್ ಟಿಸಿ ಸೇರಿ ರಾಜ್ಯದ ನಾಲ್ಕೂ ನಿಗಮದ ಯಾವುದೇ ವಿಧದ ಪಾಸ್ ಗಳ ದರ ಹೆಚ್ಚಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿಲ್ಲ. ಸದ್ಯಕ್ಕೆ ಪಾಸ್ ದರ ಹೆಚ್ಚಳ ಮಾಡುವ ಚಿಂತನೆಯೂ ಇಲ್ಲ ಎಂದು ತಿಳಿಸಿದ್ದಾರೆ.