ಬೆಂಗಳೂರು: ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಅಭಿಪ್ರಾಯ ಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎನ್.ರಾಜಣ್ಣ, ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು. ಸಿಎಲ್ ಪಿ ಸಭೆಯಲ್ಲಿಯೇ ಈ ಬಗ್ಗೆ ತೀರ್ಮಾನವಾಗಬೇಕು ಎಂದರು.
ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಇಲ್ಲ. ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ಕಮ್ಮಿ. ಅಂದು ದೇವರಾಜ ಅರಸು ಸಿಎಂ ಆಗಿದ್ದಾಗ ಎಂಎಲ್ ಎ ಆಗಿರಲಿಲ್ಲ. ಅಂದು ಅವರು ಶಾಸಕರ ಬೆಂಬಲದಿಂದ ಸಿಎಂ ಆದ್ರು. ಎಐಸಿಸಿ ವೀಕ್ಷಕರ ಅಭಿಪ್ರಾಯ ಪಡೆದು ಸಿಎಂ ಆಗಿದ್ದರು. ಆದರೆ ಸಿದ್ದರಾಮಯ್ಯನವರಿಗೆ ಶಾಸಕರ ಬೆಂಬಲ ಇದೆ ಎಂದರು.
ಈಗ ಯಡಿಯೂರಪ್ಪ ಇಲ್ಲದಿದ್ದರೆ ಬಿಜೆಪಿ ಇಲ್ಲ. ಯಡಿಯೂರಪ್ಪ ರಾಜಕೀಯದಲ್ಲಿದ್ದಾಗ ಬಿಜೆಪಿಗೆ ಅವಕಾಶವಿತ್ತು. ಹಾಗೇ ದೇವೇಗೌಡರು, ಅವರ ಕುಟುಂಬ ಇಲ್ಲ ಅಂದರೆ ಜೆಡಿಎಸ್ ಪಕ್ಷ ಇಲ್ಲ. ಹಾಗೇ ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್ ಇಲ್ಲ ಎಂದರು.




