ಬೆಂಗಳೂರು : ಮುಖ್ಯಮಂತ್ರಿಗಳ ಅಧಿಕಾರ ತ್ಯಾಗದ ಕುರಿತ ವೈರಾಗ್ಯದ ಹೇಳಿಕೆಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಸಿ.ಎಂ. ಮಾತುಗಳನ್ನು ಸಮರ್ಥಿಸಿಕೊಂಡಿರುವ ಅವರು, ‘ಯಾರಿಗೂ ಅಧಿಕಾರ ಶಾಶ್ವತವಲ್ಲ’ ಎಂದು ಪುನರುಚ್ಚರಿಸಿದರು.
ಮುಖ್ಯಮಂತ್ರಿಗಳು ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂದಲ್ಲ, ಆದರೆ ‘ಮೂವತ್ತು ತಿಂಗಳ ನಂತರವಾದರೂ ಬಿಡಬಹುದು, ಅದಕ್ಕೂ ಮೊದಲೇ ಬಿಡಬಹುದು. ಬಿಡುವುದಂತೂ ಪಕ್ಕಾ. ಯಾವಾಗಲಾದ್ರೂ ಬಿಡಲೇಬೇಕು’ ಎಂದು ಜಾರಕಿಹೊಳಿ ಹೇಳಿದ್ದಾರೆ.




