ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಿಬು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
ಇಂದು ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎನ್ ಶಿವಕುಮಾರ್ ಅವರು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಿಬು ದಾಖಲಿಸಿದ್ದಂತ ಮಾನನಷ್ಟ ಮೊಕದ್ದಮ್ಮೆಯ ಅರ್ಜಿಯ ವಿಚಾರಣೆ ನಡೆಸಿದರು.
ಈ ಪ್ರಕರಣದ ವಿಚಾರಣೆಯ ಬಳಿಕ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಆದೇಶಿಸಿದ್ದಾರೆ.
ಅಂದಹಾಗೇ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಿಬು ಉಲ್ಲೇಖಿಸಿ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ಗುಂಡೂರಾವ್ ಪತ್ನಿ ಟಿಬು ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ಇಂದು ಜಾಮೀನು ರಹಿತ ವಾರೆಂಟ್ ಅನ್ನು ಜಾರಿಗೊಳಿಸಿದೆ.