ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯಿಂದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸೇವೆಯಲ್ಲಿ ವ್ಯತ್ಯಾಯ ಉಂಟಾಗದಂತೆ ಕ್ರಮ ವಹಿಸಲು ಮಹತ್ವದ ಸೂಚನೆ ನೀಡಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ದಿ.07.01.2025 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟ ಹೋರಾಟಕ್ಕೆ ಕರೆ ನೀಡಿರುತ್ತಾರೆ.
ಸ್ವಯಂ ಸೇವಾ ಮನೋಭಾವ ಹೊಂದಿರುವ ಹಾಗೂ ನಿರ್ದಿಷ್ಟ ಮಾನದಂಡ ಪೂರೈಸುವ ಮಹಿಳೆಯರನ್ನು ಗ್ರಾಮ ಸಭೆಯಲ್ಲಿ ಸ್ಥಳೀಯರ ಅಭಿಪ್ರಾಯ ಪಡೆದು ಆಯ್ಕೆ ಮಾಡಲಾಗಿರುತ್ತದೆ. ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕುಟುಂಬದ ಜವಾಬ್ದಾರಿಯೊಂದಿಗೆ ಇಲಾಖೆಯ ಆರೋಗ್ಯ ಸಿಬ್ಬಂದಿಗಳ ಸಮನ್ವಯದೊಂದಿಗೆ ಸ್ಥಳೀಯ ಸಮುದಾಯಕ್ಕೆ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಯನ್ನು ನಿಗದಿತ ಸಮಯದಲ್ಲಿ ಪಡೆಯಲು ನೆರವಾಗುವುದು ಆಶಾ ಕಾರ್ಯಕರ್ತೆಯರ ಪಮುಖ ಜವಾಬ್ದಾರಿಯಾಗಿರುತ್ತದೆ ಎಂದಿದ್ದಾರೆ.