Ad imageAd image

15 ದಿನಗಳಲ್ಲಿ 2000 ಲೈನ್‌ಮೆನ್‌ಗಳ ನೇಮಕಕ್ಕೆ ಅಧಿಸೂಚನೆ : ಕೆ. ಜೆ ಜಾರ್ಜ್

Bharath Vaibhav
15 ದಿನಗಳಲ್ಲಿ 2000 ಲೈನ್‌ಮೆನ್‌ಗಳ ನೇಮಕಕ್ಕೆ ಅಧಿಸೂಚನೆ : ಕೆ. ಜೆ ಜಾರ್ಜ್
WhatsApp Group Join Now
Telegram Group Join Now

ರಾಯಚೂರು : ಇಂಧನ ಇಲಾಖೆಗೆ ಸದ್ಯದಲ್ಲೇ 2000 ಲೈನ್‌ಮೆನ್‌ಗಳ ನೇಮಕ ಆಗಲಿದ್ದು, ಈ ಸಂಬಂಧ 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿದ ಇಂಧನ ಸಚಿವರು, “ಲೈನ್‌ಮೆನಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು,ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ,” ಎಂದರು.

ವೈಟಿಪಿಎಸ್ ಹುದ್ದೆಗಳನ್ನು ಭರ್ತಿ ಮಾಡುವಾವಾಗ ಸ್ಥಳಿಯರಿಗೆ ಆದ್ಯತೆ ನೀಡಬೇಕು ಮತ್ತು 371 ಜೆ ಅನ್ವಯ ಮೀಸಲು ನೀಡಬೇಕು. ಆದರೆ ನುರಿತ ಕೆಲಸಗಾರರು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳೀಯರ ನೇಮಕ ಆಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ.

ಆದ್ದರಿಂದ ಎಷ್ಟು ಜನ ಬೇಕು ಅಂತ ನಿರ್ಧರಿಸಿ, ಅವರಿಗೆ ಕೆಪಿಸಿಎಲ್‌ನಿಂದ ಅಗತ್ಯ ತರಬೇತಿ ಕೊಡಿಸಲು ಅಗತ್ಯ ಕ್ರಮ ವಹಿಸಲಾಗುವುದು. ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ,” ಎಂದು ತಿಳಿಸಿದರು.

“ಈಗಾಗಲೇ 1000 ಸಹಾಯಕ ಇಂಜಿನಿಯರ್‌ಗಳ (ಎಇ), ಕಿರಿಯ ಇಂಜಿನಿಯರ್‌ಗಳ (ಜೆಇ) ನೇಮಕ ಮಾಡಿ ಕಾರ್ಯಾದೇಶವನ್ನೂ ನೀಡಿದ್ದೇವೆ. ಇಂಧನ ಇಲಾಖೆಗೆ ಹೊಸದಾಗಿ ನೇಮಕಗೊಂಡಿರುವ 400 ಸಹಾಯಕ ಇಂಜಿನಿಯರ್‌ಗಳಿಗೆ ಇತ್ತೀಚೆಗೆ ಕಾರ್ಯಾನುಭವ ತರಬೇತಿ ನೀಡಲಾಗಿದೆ.

ತ್ವರಿತ ನೇಮಕಾತಿಗಾಗಿ ಈ ಅಭ್ಯರ್ಥಿಗಳು ನನಗೆ ಮನವಿ ಸಲ್ಲಿಸಿದ್ದರು. ಇಲಾಖೆಯ ಹಿರಿಯ ಅಧಿಕಾರಳ ನಿರಂತರ ಪ್ರಯತ್ನದಿಂದ 6 ತಿಂಗಳೊಳಗೆ ನೇಮಕ ಆದೇಶ ನೀಡಲಾಗಿದೆ,” ಎಂದು ಅವರು ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!