ಹುಬ್ಬಳ್ಳಿ:-ರೈತರು ಬೆಳೆದ ಆಹಾರ ಧಾನ್ಯಗಳ ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರದ ಅನುದಾನವನ್ನು ನೂತನ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಅವರು ಹೆಚ್ಚಳ ಮಾಡವಲ್ಲಿ ಕ್ರಮ ಕೈಗೊಳ್ಳಬೇಕು. ಈ ಮೂಲಕ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಗೊಳಿಸಿ ರಾಜ್ಯಕ್ಕೆ ಆಗುವ ಅನ್ಯಾಯ ತಪ್ಪಿಸಲಿ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ರೈತರು ಭೆಳೆದ ಆಹಾರಧಾನ್ಯಗಳ ಎಂ ಎಸ್ ಪಿ ಖರೀದಿ ಅನುದಾನ ರಾಜ್ಯಕ್ಕೆ ನೀಡುವ ಪ್ರಮಾಣ ಏರಿಕೆ ಮಾಡಬೇಕು. ಪಂಜಾಬ್ ಹರಿಯಾಣ ತೆಲಂಗಾಣ ರಾಜ್ಯಗಳಲ್ಲಿ ಹೋಬಳಿ ಮಟ್ಟದಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಧಾನ್ಯಗಳನ್ನು ರೈತರಿಂದ ಶೇಕಡ 45ರಷ್ಟು ಖರೀದಿ ಮಾಡುತ್ತಾರೆ. ಆದರೆ ಕರ್ನಾಟಕದಲ್ಲಿ ಶೇಕಡ ಮೂರರಷ್ಟು ಎಂ ಎಸ್ ಪಿ ಕೇಂದ್ರಗಳ ಮೂಲಕ ಖರೀದಿ ಮಾಡುತ್ತಾರೆ ಕೇಂದ್ರ ಸರ್ಕಾರ ಖರೀದಿ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದಾರೆ .ಇದು ಕೇಂದ್ರ ಸರ್ಕಾರದ ತಾರತಮ್ಯ ನೀತಿಯಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ. ಇದನ್ನು ಗಮನಿಸಿ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯದ ರೈತರ ಹಿತವನ್ನ ರಕ್ಷಿಸಬೇಕು ಎಂದರು.
ಕಬ್ಬು ಹಾಗೂ ಸಕ್ಕರೆ ಉದ್ದಿಮೆಯನ್ನು ಡಿಜಿಟಲೀಕರಣ ಮಾಡಿ ಯಾಪ್ ಮೂಲಕ . ವೈವಾಟು ನಡೆಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿ 25000 ಕೋಟಿ ಹಣಕಾಸಿನ ವಹಿವಾಟು ನಡೆಸುವ ಸಕ್ಕರೆ ಉದ್ದಿಮೆ ಡಿಜಿಟಲಿಕರಣ ಮಾಡಿ ಕಬ್ಬು ಬೆಳೆಗಾರರ ರೈತರ ಜೊತೆ ದ್ವಿಪಕ್ಷೀಯ ಒಪ್ಪಂದ. ಕಬ್ಬಿನ ತೂಕ ಸಂದೇಶ. ಕಬ್ಬಿನ ಹಣ ಪಾವತಿ ಸಕ್ಕರೆ ಇಳುವರಿ ಸಂದೇಶ ನೀಡುವ ಆಪನ್ನು ಈಗಾಗಲೇ ಸಿದ್ದಗೊಳಿಸ ಲಾಗಿದ್ದರೂ. ರಾಜ್ಯ ಸರ್ಕಾರ ಯಾಕೆ ಜಾರಿ ಮಾಡಿಲ್ಲ. ಸಕ್ಕರೆ ಕಾರ್ಖಾನೆಗಳ ಒತ್ತಡಕ್ಕೆ ಮಣಿದು ರೈತರಿಗೆ ವ್ಯವಸ್ಥಿತ ವಂಚನೆ ನಡೆಸಲು ಸಹಕಾರ ನೀಡುತ್ತಿದೆಯ ಎಂಬುದು ಅನುಮಾನ ಮೂಡಿಸುತ್ತಿದೆ ಎಂದು ಆರೋಪಿಸಿದರು.
ಕಳೆದ ಎಂಟು ತಿಂಗಳಿಂದ ಸಕ್ಕರೆ ಕಾರ್ಖಾನೆಗಳು ಸುಮಾರು 700 ಕೋಟಿ ರೂ ಕಬ್ಬಿನ ಹಣ ರೈತರಿಗೆ ಪಾವತಿಸಿಲ್ಲ. ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಇಂಥ ಕಾರ್ಖಾನೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ ಇಂತಹ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಿ ಎಂದರು..
ಕೇಂದ್ರ ಸರ್ಕಾರ. ಬರ. ಮಳೆಹಾನಿ. ಅತಿವೃಷ್ಟಿ ಹಾನಿ ಮಳೆ ವಿಪ್ಪತ್ತು ನಷ್ಟ ಪರಿಹಾರದ. ಎನ್ ಡಿಆರ್‌ಎಫ್ ಮಾನದಂಡ ತಿದ್ದುಪಡಿ ಮಾಡಿ ಬೆಳೆ ನಷ್ಟದ ಸಂಪೂರ್ಣ ಹಣ ನೀಡಬೇಕು ಇಲ್ಲದಿದ್ದರೆ ಬರ. ಅತಿವೃಷ್ಟಿ ಮಳೆ ಹಾನಿ. ಒಳಗಾದ ರೈತರ ಬೆಳೆ ಸಾಲ ಸಂಪೂರ್ಣ ಮನ್ನ ಮಾಡುವ ನೀತಿ ಜಾರಿಗೆ ತರಬೇಕು ಎಲ್ಲಾ ರೀತಿಯ ಬೆಳೆಗಳಿಗೂ ಅನ್ವಯವಾಗುವಂತ ಪರಿಹಾರ ನೀಡುವ ನೀತಿ ಜಾರಿಗೆ ತರಬೇಕು ಈ ಬಗ್ಗೆ ರಾಜ್ಯದ ನೂತನ ಸಂಸದರು ಒತ್ತಾಯಿಸಬೇಕು ಎಂದರು.
ಕಳಪೆ ರಸಗೊಬ್ಬರ ಕೀಟನಾಶಕ ಬಿತ್ತಲೆ ಬೀಜ ಮಾರಾಟ ಮಾಡುವ ಮಾರಾಟಗಾರರಿಗೆ ಜಾಮೀನು ರಹಿತ ಬಂಧನ ಮಾಡುವ ಕಠಿಣ ಕಾನೂನು ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು.
ಇದರಿಂದ ರೈತರಿಗೆಮೋಸವಾಗುವುದು.ತಪ್ಪುತ್ತದೆ.ಎಂದರು.ಗೋಷ್ಟಿಯಲ್ಲಿ ಧಾರವಾಡ ಜಿಲ್ಲಾಧ್ಯಕ್ಷ ಮಹೇಶ್ ಬೆಳಗಾವ್ಕರ್. ಜಿಲ್ಲಾ ಕಾರ್ಯದರ್ಶಿ ಪರಶುರಾಮ್ ಎತ್ತಿನಗುಡ್ಡ. ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್. ನಿಜಗುಣ ಕೇಲಗೇರಿ ವಾಸು ಡಾಕಪ್ಪನವರ್.ಪಾಲ್ಗೊಂಡಿದ್ದರು.
ವರದಿ:- ಸುಧೀರ್ ಕುಲಕರ್ಣಿ