ಬೆಂಗಳೂರು: ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ. ಮೂರು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರ ಮುಕ್ತಾಯವಾಗಿದ್ದು, ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಮಾಡಲು ಮಾತ್ರ ಅವಕಾಶ ಇರುತ್ತದೆ.
ಕ್ಷೇತ್ರದ ಮತದಾರರಲ್ಲದವರು ಕೂಡಲೇ ಕ್ಷೇತ್ರ ಬಿಟ್ಟು ಹೊರಹೋಗಬೇಕಿದೆ. ನೀತಿ ಸಮಿತಿ ಉಲ್ಲಂಘಿಸಿದವರ ವಿರುದ್ಧ ಚುನಾವಣಾ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್, ಎನ್.ಡಿ.ಎ. ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ.
ಶಿಗ್ಗಾವಿಯಲ್ಲಿ ಎನ್.ಡಿ.ಎ.ಯಿಂದ ಭರತ್ ಬೊಮ್ಮಾಯಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಖಾನ್ ಪಠಾಣ್ ಕಣದಲ್ಲಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ, ಎನ್.ಡಿ.ಎ. ಅಭ್ಯರ್ಥಿಯಾಗಿ ಬಂಗಾರು ಲಕ್ಷ್ಮಣ್ ಸ್ಪರ್ಧಿಸಿದ್ದಾರೆ.
ಅಭ್ಯರ್ಥಿಗಳ ಪರವಾಗಿ ಘಟಾನುಘಟಿ ನಾಯಕರು ಪ್ರಚಾರ ನಡೆಸಿದ್ದಾರೆ. ಚುನಾವಣಾ ಕಣದಲ್ಲಿ ಆರೋಪ, ಪ್ರತ್ಯಾರೋಪಗಳ ಸುರಿಮಳೆಯಾಗಿದೆ. ಕೊನೆ ಕ್ಷಣದಲ್ಲಿ ಮತದಾರರ ಸೆಳೆಯಲು ಕಸರತ್ತು ನಡೆಸಲಾಗಿದೆ.