Ad imageAd image

ಫಲಶೃತಿ: ಸುದ್ದಿಯ ಪರಿಣಾಮಕ್ಕೆ ಅಧಿಕಾರಿಗಳ ಸ್ಪಂದನೆ

Bharath Vaibhav
ಫಲಶೃತಿ: ಸುದ್ದಿಯ ಪರಿಣಾಮಕ್ಕೆ ಅಧಿಕಾರಿಗಳ ಸ್ಪಂದನೆ
WhatsApp Group Join Now
Telegram Group Join Now

ಗುರುಮಠಕಲ್ : ತಾಲೂಕಿನ ಕಾಕಲವಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂ.ಟಿ.ಪಲ್ಲಿ ಗ್ರಾಮದಲ್ಲಿ ಚರಂಡಿ ನೀರು ರಸ್ತೆಯ ಮೇಲೆ ನಿಂತು ಗ್ರಾಮಸ್ಥರು ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ಬದುಕುತ್ತಿರುವ ಕುರಿತು ಭಾರತ ವೈಭವ ದಿನಪತ್ರಿಕೆಯಲ್ಲಿ ಪ್ರಕಟವಾದ ವರದಿ ಪರಿಣಾಮವಾಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುದ್ದಿ ಪ್ರಕಟವಾದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಮೇಲಿನ ಚರಂಡಿ ನೀರನ್ನು ತೆರವುಗೊಳಿಸಲು ಕ್ರಮ ಕೈಗೊಂಡಿದ್ದು, ಚರಂಡಿ ಸ್ವಚ್ಛತೆ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಜೊತೆಗೆ ಮುಂದಿನ ದಿನಗಳಲ್ಲಿ ಈ ರೀತಿಯ ಸಮಸ್ಯೆಗಳು ಉಂಟಾಗದಂತೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವುದಾಗಿ ಅಧಿಕಾರಿಗಳು ಗ್ರಾಮಸ್ಥರಿಗೆ ಭರವಸೆ ನೀಡಿದರು.
ಸುದ್ದಿ ಪ್ರಕಟವಾದ ಬಳಿಕ ತಕ್ಷಣ ಕ್ರಮ ಕೈಗೊಂಡ ಅಧಿಕಾರಿಗಳಿಗೆ ಗ್ರಾಮಸ್ಥರು ಧನ್ಯವಾದ ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!