ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಏಪ್ರಿಲ್ 27 ಭಾನುವಾರದಂದು ಬೆಳಿಗ್ಗೆ 11-00 ಗಂಟೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಘನ ಉಪಸ್ಥಿತಿ, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್, ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ ಪಾಟೀಲ್, ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರು ವಿಶೇಷ ಉಪಸ್ಥಿತಿ ಇರಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ವಹಿಸಲಿದ್ದಾರೆ.