ಚಿಕ್ಕೋಡಿ : ಸಂಸದೆ ಪ್ರಿಯಾಂಕಾ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದಲ್ಲಿ 2024-2025ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜೂ.15ರಂದು ಚಿಕ್ಕೋಡಿ ಪಟ್ಟಣದ ಇಂದಿರಾ ನಗರದ ಹತ್ತಿರ ಇರುವ ಸಂಸದರ ಕಚೇರಿಯಲ್ಲಿ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ ಎಂದು ಬೆಳಗಾವಿ ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಹೇಳಿದರು.
ಸಂಸದರ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಬರುವ ಹತ್ತು ವಿಧಾನಸಭಾ ಕ್ಷೇತ್ರದಲ್ಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಮೊದಲನೆ, ದ್ವಿತೀಯ ಹಾಗೂ ಮೂರನೆ ಸ್ಥಾನ ಪಡೆದಿರುವ ಒಟ್ಟು 100 ವಿದ್ಯಾರ್ಥಿಗಳನ್ನು ಯುವ ಸಂಸದರು ಸನ್ಮಾನಿಸಿ ಅವರಿಗೆ ಬಹುಮಾನ ಹಾಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಿದ್ದಾರೆ ಎಂದರು.
ಸಮಾರಂಭದಲ್ಲಿ ಚಿಕ್ಕೋಡಿ-ಸದಲಗಾ ಕ್ಷೇತ್ರದ ಶಾಸಕ ಗಣೇಶ ಹುಕ್ಕೇರಿ ಹಾಗೂ ಬುಡಾ ಅಧ್ಯಕ್ಷ ಲಕ್ಷಣರಾವ ಚಿಂಗಳೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಬೆಳಗಾವಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ಚಿಕ್ಕೋಡಿ ಡಿಡಿಪಿಯು ಪಾಂಡುರಂಗ ಭಂಡಾರಿ, ಡಿಡಿಪಿಐ ಆರ್.ಎಸ್. ಸೀತಾರಾಮು, ಮಜಲಟ್ಟಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವಿಶ್ವನಾಥ ಚೌಗಲಾ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ,ಪ್ರಭಾಕರ ಕೋರೆ, ಕೆಪಿಸಿಸಿ ಸದಸ್ಯ ರಾಜು ಕೋಟಗಿ, ರಾಮಕೃಷ್ಣ ಪಾನಗೂಡೆ,ಫಿರೋಜ ಕಲಾವಂತ ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ