Ad imageAd image

ಮೇ 20 ರಂದು ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ

Bharath Vaibhav
ಮೇ 20 ರಂದು ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ
WhatsApp Group Join Now
Telegram Group Join Now

–ಕೂಡ್ಲಿಗಿ ಶಾಸಕರಾದ ಶ್ರೀನಿವಾಸ್ ಎನ್. ಟಿ. ಅವರ ನೇತೃತ್ವದಲ್ಲಿ ಪೂರ್ವ ಭಾವಿ ಸಭೆ–

ಕೂಡ್ಲಿಗಿ : ವಿಧಾನ ಸಭಾ ಕ್ಷೇತ್ರದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಮತ್ತು ಜಿಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ಮಹತ್ವದ ಸಭೆ ನಡೆಸಲಾಯಿತು.

ವಿಜಯ ನಗರ ಜಿಲ್ಲೆಯ ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ ತಿಂಗಳಲ್ಲಿ ನಡೆಯುವ ಮೇ 20 ರಂದು ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶದ ಪೂರ್ವ ಭಾವಿ ಸಭೆಯನ್ನು ನಡೆಸಲಾಯಿತು. ಇದು ಸರ್ಕಾರದ ಕಾರ್ಯಕ್ರಮ ಆಗಿರುವುದರಿಂದ ಫಲಾನುಭವಿಗಳನ್ನು ಗುರುತಿಸಿ, ತಳಮಟ್ಟದಲ್ಲಿ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳುವ ನಿಟ್ಟಿನಲ್ಲಿ ಅವರನ್ನು ಸಮಾವೇಶಕ್ಕೆ ಕರೆದುಕೊಂಡು ಬರಬೇಕು ಎಂದರು.

ನಮ್ಮ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿರುವ ಊರುಗಳನ್ನು ಗುರುತಿಸಿದ್ದಾರೆ. ಒಂದು ವೇಳೆ ಮಳೆ ಬರದೇ ಇದ್ದಲ್ಲಿ, ಸರ್ಕಾರದ ಮಟ್ಟದಲ್ಲಿ ಖಾಸಗಿ ಬೋರ್ ವೆಲ್ ಸಹಕಾರದಿಂದ ಕುಡಿಯುವ ನೀರಿನ ಬವಣೆ ನೀಗಿಸಲು ಸಿದ್ಧವಾಗಿರಬೇಕು ಎಂದರು.‌ ಹಳ್ಳಿಗಳಲ್ಲಿ ಸ್ಮಶಾನಗಳು ಅಭಿವೃದ್ಧಿಯಿಂದ ಒಂಚಿತವಾಗಿವೆ. ಅವುಗಳಿಗೆ ಮೂಲ ಸೌಕರ್ಯಗಳ ಅಗತ್ಯವಿದೆ.‌ ವ್ಯಕ್ತಿ ಬದುಕಿದಾಗ ಅರ್ಥ ಮಾಡಿಕೊಳ್ಳಲಿಲ್ಲ.

ಸತ್ತಾಗಲೂ ಆದರೂ ಮುಕ್ತಿ ಸಿಗುವಂತೆ ನೋಡಿಕೊಳ್ಳಿ ಎಂದೂ ಅಧಿಕಾರಿಗಳನ್ನು ಶಾಸಕರು ಎಚ್ಚರಿಸಿದರು.‌ ಈ ಸಂದರ್ಭದಲ್ಲಿ ಜಿಲ್ಲಾ ಅಧಿಕಾರಿಗಳಾದ ಎಮ್. ಎಸ್. ದಿವಾಕರ್, ಹಾಗೂ ಕೂಡ್ಲಿಗಿ ತಾಲೂಕಿನ ತಹಶೀಲ್ದಾರರಾದ ಶ್ರೀ ನೇತ್ರಾವತಿ , ವಿವಿಧ ಅಧಿಕಾರಿಗಳು, ಗ್ರಾ. ಪಂ. ಪಿಡಿಓಗಳು , ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!