ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಳೆದ ಹಲವು ತಿಂಗಳಿನಿಂದ ಅನೇಕ ರೈತ ಪರ ಹಾಗೂ ಕನ್ನಡ ಸಂಘಟನೆಗಳ ಪರ ಹೋರಾಟ ನಡೆಯುತ್ತಿದ್ದು ಇದೀಗ ಕನ್ನಡಪರ ಹಿರಿಯ ಹೋರಾಟಗಾರರಾದ ವಾಟಳ್ ನಾಗರಾಜ್ ಸೆಪ್ಟೆಂಬರ್ 29ರಂದು ಶುಕ್ರವಾರ ಅಖಂಡ ಕರ್ನಾಟಕ ಬಂದ್ ಮಾಡುವ ಕುರಿತು ನಾಳಿನ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ನಿರತರಾಗಿದ್ದ, ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಂಗಳೂರಿಂದ ಕೋಲಾರದವರೆಗೆ ಮತ್ತು ಉತ್ತರ ಕರ್ನಾಟಕದಲ್ಲಿ ಬೆಳಗಾವಿ ವಿಜಾಪುರ ಸೇರಿದಂತೆ ಇಡೀ ರಾಜ್ಯದ ರೈತರು ಈ ಬಂದ್ ಗೆ ಸೇರುತ್ತಿದ್ದಾರೆ.
29 ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಬಂದ್ ಮಾಡುವುದಾಗಿ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು. ಎಂದು ತಿಳಿಸಿದರು.
ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ ಶುಕ್ರವಾರ ಸಂಪೂರ್ಣ ಕರ್ನಾಟಕ ಬಂದ್ ಗೆ ವಾಟಾಳ್ ಕರೆ ಕೊಟ್ಟಿದ್ದಾರೆ. ಕನ್ನಡ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಈ ಕುರಿತಂತೆ ಘೋಷಣೆ ಮಾಡಿದ್ದು, ನಾಳಿನ ಸಭೆಯಲ್ಲಿ ಈ ಬಗ್ಗೆ ನಾವು ಅಧಿಕೃತವಾಗಿ ಘೋಷಣೆಯನ್ನು ಮಾಡುತ್ತೇವೆ ಎಂದು ಹೇಳಿದ್ದಾರೆ.