ಹುಬ್ಬಳ್ಳಿ:-ಸಿಎಂ ಸಿದ್ದರಾಮಯ್ಯ ಅವರ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ರಾಷ್ಟ್ರೀಯ ಅಹಿಂದ ಒಕ್ಕೂಟದ ವತಿಯಿಂದ ಅಹಿಂದ ನಾಯಕರನ್ನು ಉಳಿಸಿ ಎಂಬ ಜಾಥಾವನ್ನು ಅಕ್ಟೋಬರ್ 3 ರಂದು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷರಾದ ಮುತ್ತಣ್ಣ ಶಿವಳ್ಳಿ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ರಹಿತ ಆಡಳಿತ ಕೊಟ್ಟವರು, ಅಂತಹ ನಾಯಕರ ಮೇಲೆ ಸಂಕಷ್ಟ ತರುವಂತಹ ಕಾರ್ಯವನ್ನು ಬಿಜೆಪಿ ಮಾಡಿದ್ದು, ಎಲ್ಲೆಲ್ಲಿ ಬಿಜೆಪಿ ಆಡಳಿತವಿಲ್ಲವೂ ಅಲ್ಲಿ ರಾಜ್ಯಪಾಲರನ್ನು ಮುಂದುಟ್ಟುಕೊಂಡು ಸರ್ಕಾರ ಕೆಡವಲು ಮುಂದಾಗಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.
ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಇಂದಿರಾಗಾಜಿನ ಮನೆಯಿಂದ ಜಾಥಾ ಆರಂಭವಾಗಿ ಡಾ. ಅಂಬೇಡ್ಕರ್ ವೃತ್ತದಲ್ಲಿರುವ ಪ್ರತಿಮೆಗೆ ಮಾಲಾರ್ಪನೆ ಮಾಡಿ ಕುಂದಗೋಳ ಮೂಲಕ ಬೆಂಗಳೂರಿನ ವಿಧಾನಸೌಧಕ್ಕೆ ಸಾಗಲಾಗುವುದು ಎಂದರು.
136 ಶಾಸಕರು ಸೇರಿದಂತೆ, ಸಿದ್ದರಾಮಯ್ಯ ಅಭಿಮಾನಿಗಳು, ದಲಿತ ಸಂಘಟನೆಗಳು ಸೇರಿದಂತೆ ಎಲ್ಲರೂ ನೈತಿಕ ಬೆಂಬಲ ನೀಡುತ್ತಿದ್ದು, ಜಾಥಾದಲ್ಲಿ ಸಾವಿರಾರು ಜನರು ಭಾಗಿಯಾಗಲಿದ್ದಾರೆ ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರ ಬೆಂಬಲವಾಗಿ ನಾವಿದ್ದು, ಸಿಎಂ ಅವರು ರಾಜೀನಾಮೆ ನೀಡದೆ ಆಡಳಿತ ಮುಂದುವರೆಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಜಶೇಖರ ಮೆಣಸಿನಕಾಯಿ, ಬಾಬಾಜಾನ್ ಮುಧೋಳ, ವೀರಣಗೌಡ ಪಾಟೀಲ್, ವಿಶಾಲ ವಾಘಮೋಡೆ, ಶ್ರೀಧರ ದೊಡ್ಡಮನಿ, ಸಂಗೀತಾ ಚಾವರೆ ಉಪಸ್ಥಿತರಿದ್ದರು.
ವರದಿ:-ಸುಧೀರ್ ಕುಲಕರ್ಣಿ