Ad imageAd image

ತಾಯಿ ಮಗನ ಕೊಲೆ ಪ್ರಕರಣದ ಓರ್ವ ಆರೋಪಿ ಪೊಲೀಸರಿಗೆ ಹೆದರಿ ಆತ್ಮಹತ್ಯೆಗೆ ಶರಣು

Bharath Vaibhav
ತಾಯಿ ಮಗನ ಕೊಲೆ ಪ್ರಕರಣದ ಓರ್ವ ಆರೋಪಿ ಪೊಲೀಸರಿಗೆ ಹೆದರಿ ಆತ್ಮಹತ್ಯೆಗೆ ಶರಣು
WhatsApp Group Join Now
Telegram Group Join Now

ಬೆಳಗಾವಿ: ಅಥಣಿ ತಾಲೂಕಿನಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿಯೊಬ್ಬ ಪೊಲೀಸರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನೊಬ್ಬ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾನೆ.

ಕಳೆದ ಭಾನುವಾರ ಅಥಣಿ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ತಾಯಿ-ಮಗನನ್ನು ಕತ್ತು ಹಿಸುಕಿ, ಕೊಲೆಗೈದು ಪರಾರಿಯಾಗಿದ್ದ ಆರೋಪಿಗಳಲ್ಲಿ ಓರ್ವ ಪೊಲೀಸರನ್ನು ಕಂಡು ಹೆದರಿ ಓಡಿಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನೋರ್ವ ಆತ್ಮಹತ್ಯೆಯಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆಯ ವಿವರ: ಏಪ್ರಿಲ್ 13ರಂದು ಕೊಡಗಾನೂರು ಗ್ರಾಮದಲ್ಲಿನ ತೋಟದ ವಸತಿ ಪ್ರದೇಶದಲ್ಲಿ ಚಂದ್ರವ್ವ ಅಪ್ಪಾರಾಯ ಇಚೇರಿ (62) ಹಾಗೂ ವಿಠಲ್‌ ಅಪ್ಪರಾಯ ಇಚೇರಿ (42) ಎಂಬ ತಾಯಿ ಮತ್ತು ಮಗನನ್ನು ಕೊಲೆಗೈದ ದುಷ್ಕರ್ಮಿಗಳು ಶವಗಳನ್ನು ಕಬ್ಬಿನ ಗದ್ದೆಯಲ್ಲಿ ಎಸೆದು ಪರಾರಿಯಾಗಿದ್ದರು. ಸುರೇಶ್ ರಾಮಪ್ಪ ಸವದತ್ತಿ (36) ಹಾಗೂ ಶ್ರೀಶೈಲ ಸಂಗಣ್ಣ ಹೊರಟ್ಟಿಗೆ (40) ಈ ಪ್ರಕರಣದ ಆರೋಪಿಗಳಾಗಿದ್ದರು.

ಈ ಕುರಿತು ಬೆಳಗಾವಿ ಎಸ್‌ಪಿ ಭೀಮಾಶಂಕರ ಗುಳೇದ ಮಾತನಾಡಿ, ”ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರ ಕೊಲೆ ಪ್ರಕರಣ ದಾಖಲಾಗಿತ್ತು. ಪೊಲೀಸರು ವೈಜ್ಞಾನಿಕವಾಗಿ ತನಿಖೆ ನಡೆಸಿ ಆರೋಪಿಗಳ ಪತ್ತೆ ಹಚ್ಚಿದ್ದರು. ಇದರಲ್ಲಿ ಓರ್ವ ಆರೋಪಿ ಶೇಗುಣಸಿ ಗ್ರಾಮದವನೆಂದು ಖಚಿತವಾಗುತ್ತಿದ್ದಂತೆ, ನಿನ್ನೆ (ಬುಧವಾರ) ಅಥಣಿ ತಾಲೂಕಿನ ಶೇಗುಣಸಿ ಗ್ರಾಮಕ್ಕೆ ಹೋಗಿ ಸ್ಥಳೀಯರನ್ನು ವಿಚಾರಿಸಿದಾಗ ಇನ್ನೋರ್ವ ಆರೋಪಿಯೂ ಅದೇ ಗ್ರಾಮದವನು ಎಂದು ತಿಳಿದು ಬಂದಿದೆ. ಪ್ರಮುಖ ಆರೋಪಿಯಾದ ಸುರೇಶ್ ಸವದತ್ತಿ ಮನೆಯಲ್ಲಿರಲಿಲ್ಲ. ಆದರೆ ಸುರೇಶನ ಸ್ನೇಹಿತ (ಸಂಗಡಿಗ) ಪೊಲೀಸರು ಮನೆಗೆ ಬಂದಿರುವುದನ್ನು ತಿಳಿದು ತಕ್ಷಣವೇ ಅಲ್ಲಿಂದ ಓಡಿ ಹೋಗಿ, ಕಬ್ಬಿನ ಗದ್ದೆಯಲ್ಲಿ ಅವಿತು ಕುಳಿತಿದ್ದ. ಆಗ ಕಬ್ಬಿನ ಗದ್ದೆಯ ಸುತ್ತಲೂ ನಮ್ಮ ಸಿಬ್ಬಂದಿ ಸುತ್ತುವರಿದಿದ್ದರು’ ಎಂದು ತಿಳಿಸಿದರು.

ವರದಿ: ರಾಜು ಮುಂಡೆ

WhatsApp Group Join Now
Telegram Group Join Now
Share This Article
error: Content is protected !!