ನವದೆಹಲಿ: ಪಾಕಿಸ್ತಾನ ಭಾರತದ ಮೇಲೆ ದಾಳಿಗೆ ಯತ್ನಿಸಿದೆ. ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ದಾಳಿಗೆ ಯತ್ನಿಸಿದೆ. ಆದರೇ ಪಾಕಿಸ್ತಾನದ ದಾಳಿಯನ್ನು ಭಾರತ ನಿಷ್ಕ್ರೀಯಗೊಳಿಸಿದೆ. ಪಾಕಿಸ್ತಾನ ನಡೆಸಿದಂತ ದಾಳಿಯಲ್ಲಿ 16 ಅಮಾಯಕರು ಬಲಿಯಾಗಿದ್ದಾರೆ.
ಪಾಕಿಸ್ತಾನದ ವಿರುದ್ಧ ಭಾರತದಲ್ಲಿ ಆಪರೇಷನ್ ಸಿಂಧೂರ್ ಚಾಪ್ಟರ್-2 ಆರಂಭಿಸೋ ಸುಳಿವನ್ನು ಕೇಂದ್ರ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ವಿಂಗ್ ಕಮಾಂಡರ್ ವ್ಯೋಮಿಕಾ, ವಿಕ್ರಮ್ ಮಿಸ್ತ್ರಿ ಅವರು, ಲಾಹೋರ್ ನಲ್ಲಿದ್ದ ಏರ್ ಡಿಫೆನ್ಸ್ ಸಿಸ್ಟಂ ನಾಶ ಮಾಡಿದ್ದೇವೆ. ಪಾಕಿಸ್ತಾನ ವಿರುದ್ಧ ಆಪರೇಷನ್ ಸಿಂಧೂರ್ ಚಾಪ್ಟರ್-2 ಮುಂದುವರೆದಿದೆ ಎಂದರು.
ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘಿಸಿದೆ. ಪಹಲ್ಗಾಮ್ ಉಗ್ರರ ದಾಳಿ ಬಳಿಕ ಉದ್ವಿಗ್ನತೆ ಹೆಚ್ಚಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಪಹಲ್ಗಾಮ್ ಉಗ್ರರ ದಾಳಿಯೇ ಉದ್ವಿಗ್ನತೆಗೆ ಮೂಲ ಕಾರಣವಾಗಿದೆ ಎಂದರು.
ಪಹಲ್ಗಾಮ್ ದಾಳಿಯ ಹೊಣೆಯನ್ನ ಟಿ ಆರ್ ಎಸ್ ಸಂಘಟನೆ ಹೊತ್ತುಕೊಂಡಿದೆ. ಪಾಕ್ ಸೇನೆ ಭಾರತೀಯ ಸೇನಾ ನೆಲೆ ಗುರಿಯಾಗಿಸಿ ದಾಳಿಗೆ ಯತ್ನಿಸಿತ್ತು. ಕ್ಷಿಪಣಿ, ಡ್ರೋನ್ ಮೂಲಕ ಯತ್ನಿಸಿತ್ತು.
ಲಷ್ಕರ್ ಭಯೋತ್ಪಾದಕ ಸಂಘಟನೆಗೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಿದೆ. ಪಾಕಿಸ್ತಾನದಲ್ಲಿ ನಾಗರೀಕರನ್ನು ಗುರಿಯಾಗಿಸಿ ಭಾರತ ದಾಳಿ ಮಾಡಿಲ್ಲ ಎಂಬುದಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.




