ಬೆಂಗಳೂರು: ಭಾರತೀಯ ಸೇನೆಯ ನಡೆಸಿದಂತ ಆಪರೇಷನ್ ಸಿಂಧೂ ಕಾರ್ಯಾಚರಣೆ ಯಶಸ್ವಿಯಾಗಿದ್ದರಿಂದಾಗಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವಂತ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದೆ. ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ದಿನಾಂಕ:22.04.2025ರಂದು ಕಾಶ್ಮೀರದ ವಹಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ,ದಿನಾಂಕ:07.05.2025ರಂದು ಮುಂಜಾನ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್, ಸಿಂಧೂ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಎಂದಿದ್ದಾರೆ.
ಆದ್ದರಿಂದ ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಭಾರತೀಯ ಸೇನೆಯ ಕಾರ್ಯಾಚರಣೆಗೆ ಶುಭಾಶಯವನ್ನು ಸಲ್ಲಿಸಿರುತ್ತಾರೆ ಎಂದು ತಿಳಿಸಿದ್ದಾರೆ. ನಮ್ಮ ಭಾರತದ ಹಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಸಚಿವರ ಸೂಚನೆಯ ಮೇರೆಗೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತಾ, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಪೂಜೆಗಳನ್ನು ನೆರವೇರಿಸಲು ಕ್ರಮ ಕೈಗೊಳ್ಳಲು ಈ ಮೂಲಕ ಆದೇಶಿಸಿದ್ದಾರೆ.




