ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿ ಪಡೆಯಲು ಆಹಾರ ನಾಗರೀಕ ಸರಬರಾಜು ಇಲಾಖೆ ಅರ್ಜಿ ಆಹ್ವಾನಿಸಿದೆ. ಎಪಿಎಲ್ ಮತ್ತು ಬಿಪಿಲ್ ಕಾರ್ಡ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಮೇ.5 ರ ಇಂದು ಮಧ್ಯಾಹ್ನ 1 ರಿಂದ 3 ರ ವರೆಗು, ahara.kar.nic.inನಲ್ಲಿ ಅಥವಾ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
APL ಹಾಗೂ BPL ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದ್ದು, 01-05-2025 ರಿಂದ 05-05-2025 ರವರೆಗೆ ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ
ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು.
ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು.
ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ.
ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು
ವೋಟರ್ ಐಡಿ
ಆಧಾರ್ ಕಾರ್ಡ್
ವಯಸ್ಸಿನ ಪ್ರಮಾಣ ಪತ್ರ
ಡ್ರೈವಿಂಗ್ ಲೈಸೆನ್ಸ್
ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
ಮೊಬೈಲ್ ಸಂಖ್ಯೆ
ಸ್ವಯಂ ಘೋಷಿತ ಪ್ರಮಾಣ ಪತ್ರ