Ad imageAd image

ಪುಣೆ-ಬೆಳಗಾವಿ-ಹುಬ್ಬಳ್ಳಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಪ್ರಾರಂಭಿಸಬೇಕು ಎಂಬ ನಮ್ಮ ಮನವಿಗೆ ಸ್ಪಂದಿಸಿ, ನಮ್ಮ ಬೆಳಗಾವಿ

Bharath Vaibhav
ಪುಣೆ-ಬೆಳಗಾವಿ-ಹುಬ್ಬಳ್ಳಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಪ್ರಾರಂಭಿಸಬೇಕು ಎಂಬ ನಮ್ಮ ಮನವಿಗೆ ಸ್ಪಂದಿಸಿ, ನಮ್ಮ ಬೆಳಗಾವಿ
WhatsApp Group Join Now
Telegram Group Join Now

ಬೆಳಗಾವಿ:- ಜನರ ಬಹುದಿನಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು ಪುಣೆ – ಬೆಳಗಾವಿ – ಹುಬ್ಬಳ್ಳಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಂದ ಚಾಲನೆ ದೊರೆತಿದೆ. ಈ ಸಂತಸದ ಸಂದರ್ಭವನ್ನು ಆಚರಿಸಲು ಹಾಗೂ ಬೆಳಗಾವಿಗೆ ಆಗಮಿಸಿದ ರೈಲನ್ನು ಸ್ವಾಗತಿಸಿಕೊಳ್ಳಲು, ಬೆಳಗಾವಿ ರೈಲು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಮತ್ತು ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಲಾಯಿತು.

ಬೆಳಗಾವಿಯಿಂದ ಹುಬ್ಬಳ್ಳಿಗೆ ವಂದೇ ಭಾರತ್ ರೈಲಿನಲ್ಲಿ ಸಂಚರಿಸಲಾಯಿತು.

ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ರಾಜ್ಯ ಖಾತೆ ಸಚಿವರಾದ ಶ್ರೀ ವಿ.ಸೋಮಣ್ಣ ಅವರಿಗೆ ಬೆಳಗಾವಿ ಜನತೆಯ ಪರವಾಗಿ ಸಹಸ್ರ ಸಹಸ್ರ ಧನ್ಯವಾದಗಳು.

ಈ ಸಂದರ್ಭದಲ್ಲಿ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ, ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಶ್ರೀಮತಿ ಸವಿತಾ ಕಾಂಬಳೆ, ಮಾಜಿ ಸಂಸದರಾದ ಶ್ರೀಮತಿ ಮಂಗಲಾ ಅಂಗಡಿ, ಮಾಜಿ ಶಾಸಕರಾದ ಶ್ರೀ ಅನಿಲ್ ಬೆನಕೆ, ಶಾಸಕರಾದ ಶ್ರೀ ವಿಠ್ಠಲ್ ಹಲಗೇಕರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ, ಬೆಳಗಾವಿ ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ವರದಿ:- ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!