ಸೇಡಂ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಇಮಾಡಪುರ ಗ್ರಾಮ ಘಟಕ ಅಧ್ಯಕ್ಷರಾದ ರವಿ ಸಿಂಗ್ ರಜಪೂತ್ ಅವರ ಜನ್ಮ ದಿನದ ನಿಮಿತ್ಯ ಆಸ್ಪತ್ರೆಯಲ್ಲಿನ ಸಾರ್ವಜನಿಕರಿಗೆ ಹಣ್ಣು, ಹಂಪಲು ವಿತರಣೆ ಮಾಡಿ ಆಚರಣೆ ಮಾಡಿಕೊಂಡರು.
ಈ ಸಂದರ್ಭದಲ್ಲಿ ಭಾಗಿಯಾಗಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಅಧ್ಯಕ್ಷರಾದ ಡಾ. ರಾಮಚಂದ್ರ ಗುತ್ತೇದಾರ್ ಅವರು ನಮ್ಮ ಸಂಘಟನೆಯ ಉದ್ದೇಶ ಒಂದೇ ಆಗಿರುತ್ತದೆ ನಾವು ನಮ್ಮ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಈ ಒಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಮಾಜ ಸೇವೆ ಮತ್ತು ಕನ್ನಡದ ಅಭಿಮಾನವನ್ನು ಹೊಂದಿರುವ ಪ್ರತಿಯೊಬ್ಬ ಪದಾಧಿಕಾರಿಗಳು ತಮ್ಮ ಜನ್ಮ ದಿನವನ್ನು ಈ ರೀತಿ ಆಚರಣೆ ಮಾಡಿಕೊಳ್ಳುವ ಮೂಲಕ ಸಮಾಜ ಸೇವೆಯಲ್ಲಿ ತಾನೊಬ್ಬ ಭಾಗಿಯಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಮತ್ತು ಕನ್ನಡ ಅಭಿಮಾನಿಗಳು ಭಾಗಿಯಾಗಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




