Ad imageAd image

ತುಂಬಿ ಹರಿಯುತ್ತಿರುವ ಬೆಳಗಾವಿ ಸಪ್ತ ನದಿಗಳು : 6 ಸೇತುವೆಗಳು ಮುಳುಗಡೆ

Bharath Vaibhav
ತುಂಬಿ ಹರಿಯುತ್ತಿರುವ ಬೆಳಗಾವಿ ಸಪ್ತ ನದಿಗಳು : 6 ಸೇತುವೆಗಳು ಮುಳುಗಡೆ
WhatsApp Group Join Now
Telegram Group Join Now

ಬೆಳಗಾವಿ: ಮಹಾರಾಷ್ಟ್ರ ಹಾಗೂ ಪಶ್ಚಿಮ ಘಟ್ಟ, ಬೆಳಗಾವಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ಬೆಳಗಾವಿಯಲ್ಲಿ ಸಪ್ತ ನದಿಗಳು ತುಂಬಿ ಹರಿಯುತ್ತಿವೆ.

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದಾಗಿ ಕೃಷ್ಣಾ, ವೇದಗಗಾ, ದೂದಗಗಾ ನದಿಯ ಒಳಹರಿವು ಹೆಚ್ಚಾಗಿದೆ. ಈ ಮೂರೂ ನದಿಗಳು ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದು, ಚಿಕ್ಕೋಡಿ ವಿಭಾಗದ ಆರು ಕೆಳ ಹಂತದ ಸೇತುವೆಗಳು ಮುಳುಗಡೆಯಾಗಿವೆ.

ಈ 6 ಸೇತುವೆಗಳು ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ 12 ಗ್ರಾಮಗಳ ಸಪರ್ಕ ಕಡಿತಗೊಂಡಿದೆ. ಬರವಾಡ-ಕುನ್ನೂರು, ಬೋಜ-ಕಾರದಗಾ, ಭೋಜವಾಡಿ-ಕುನ್ನೂರು, ಯಡೂರು-ಕಲ್ಲೋಳ, ಭಾವನಸೌಂಡತ್ತಿ- ಮಂಜರಿ ಸೇತುವೆಗಳು ಮುಳುಗಡೆಯಾಗಿದ್ದು, ಈ ಭಾಗದ ಗ್ರಾಮಗಳ ಜನರು ಹೊರಗಿನ ಸಂಪರ್ಕವೇ ಇಲ್ಲದಂತೆ ಬದುಕುವ ಸ್ಥಿತಿ ನಿರ್ಮಾಣವಾಗಿದೆ.

ಮತ್ತೊದೆಡೆ ಖಾನಾಪುರದ ಕಾಡಂಚಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮಲಪ್ರಭಾ ನದಿ ಬೋರ್ಗರೆದು ಹರಿಯುತ್ತಿದೆ. ಖಾನಾಪುರದ ಹಬ್ಬಾನಟ್ಟಿ ಗ್ರಾಮದ ಪ್ರಸಿದ್ಧ ಆಂಜನೇಯ ದೇಗುಲ ಸಂಪೂರ್ಣ ಮುಳುಗಡೆಯಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!