Join The Telegram | Join The WhatsApp |
ಇಲಕಲ್ : ಶ್ರೀ ಪದ್ಮಭೂಷಣ ಮಹಿಳಾ ವಿವಿಧೋದ್ದೇಶಗಳ ಅಭಿವೃದ್ಧಿ ಸಂಸ್ಥೆ(ರಿ)ಇಲಕಲ್, ಇದರ ಉದ್ಘಾಟನಾ ಕಾರ್ಯಕ್ರಮವನ್ನು ಪರಮಪೂಜ್ಯ *ಶ್ರೀ ಗುರು ಮಹಾಂತ ಮಹಾಸ್ವಾಮಿಗಳು ವಿಜಯ ಮಹಾಂತೇಶ ಮಠ ಇಲಕಲ್ ಇವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶ್ರೀಗಳು ಮಾತನಾಡಿ ಮಹಿಳೆಯರು ಸಮಾಜದಲ್ಲಿ ಹೆಚ್ಚು ಹೆಚ್ಚು ಸಂಘಟನೆಯನ್ನು ಮಾಡಬೇಕು ಸಂಘಟನೆಯಿಂದ ಮಹಿಳೆಯರು ಸಮಾಜದಲ್ಲಿ ಪ್ರಬಲರಾಗಬೇಕೆಂದು ತಿಳಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಯುತ ಆರ್ ಆರ್ ಪಾಟೀಲ್ ಸರ್ ವಹಿಸಿದ್ದರು. ಮಹಿಳೆಯರು ಎನ್.ಜಿ.ಓ ಮೂಲಕ ಸರ್ಕಾರದಿಂದ ಬರುವಂತಹ ಸೌಲಭ್ಯಗಳನ್ನು ಪಡೆದುಕೊಂಡು ಸದೃಡರಾಗಬೇಕೆಂದು ಹೇಳಿದರು. ಅದೇ ರೀತಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಬಸಮ್ಮ ಕರ್ಲಿ ಅವರು ಮಾತನಾಡಿ ಮಹಿಳೆಯರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕೆಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರು ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
Join The Telegram | Join The WhatsApp |