Ad imageAd image

ಈದ್ ಮಿಲಾದ್ ಮೆರವಣಿಗೆಯಲ್ಲಿ ಕಿಡಿಗೇಡಿಗಳಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ 

Bharath Vaibhav
ಈದ್ ಮಿಲಾದ್ ಮೆರವಣಿಗೆಯಲ್ಲಿ ಕಿಡಿಗೇಡಿಗಳಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ 
WhatsApp Group Join Now
Telegram Group Join Now

ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಕೆಲವು ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ತಿಳಿದು ಬಂದಿದೆ.

ಪಾಕ್ ಪರ ಘೋಷಣೆ ಕೂಗಿದ ವಿಡಿಯೋ ವೈರಲ್ ಆಗಿದ್ದು, ಕ್ರಮಕ್ಕೆ ಹಿಂದೂ ಸಂಘಟನೆಗಳು ಆಗ್ರಹಿಸಿದೆ.ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಈ ಘಟನೆ ನಡೆದಿದೆ. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಭದ್ರಾ‍ವತಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಎಸ್ ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!