ಬೆಳಗಾವಿ : ಮಳೆ ಅಬ್ಬರಕ್ಕೆ ಹಳ್ಳ, ಕೊಳ್ಳ, ನದಿಗಳು ಅಪಾಯದ ಮಟ್ಟ, ಮೀರಿ ಹರಿಯುತ್ತಿದ್ದು, ಹಲವೆಡೆ ಸೇತುವೆಗಳು ಜಲಾವೃತಗೊಂಡಿವೆ. ಅಪಾಯವನ್ನೂ ಲೆಕ್ಕಿಸದೇ ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ವ್ಯಕ್ತಿಯೊಬ್ಬ ಬೈಕ್ ಸಮೇತ ನೀರಿನಲ್ಲಿ ಕೊಬ್ಬಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಾರಿಹಾಳ ಬಳಿ ನಡೆದಿದೆ.
ಪಂಚಾಯತ್ ಸಿಬ್ಬಂದಿ ಸುರೇಶ್ ವಿಜಗುಣಿ ಗುಂಡನ್ನವರ್ (50) ವೀರಿನಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿ. ಪಂಚಾಯತ್ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಬೀಡುಬಿಟ್ಟಿದ್ದು, ನೋರಿನಲ್ಲಿ ಹೊಚ್ಚಿ ಹೋಗಿರುವ ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ. ಹಿರೇ ಬಾಗೇ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




