ತುಮಕೂರು: ಗೃಹ ಸಚಿವ ಜಿ ಪರಮೇಶ್ವರ್ ಅವರು ಶೀಘ್ರವೇ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ಮೈಲಾರಲಿಂಗೇಶ್ವರ ಗೊರವಯ್ಯ ಭವಿಷ್ಯ ನುಡಿದಿದ್ದಾರೆ.
ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಅವಣದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಆಕಸ್ಮಿಕವಾಗಿ ಭೇಟಿ ನೀಡಿದ ಮೈಲಾರ ದೇವರ ಗೊರವಯ್ಯ ಕಚೇರಿಯ ಆಡಳಿತ ಸಿಬ್ಬಂದಿಯೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಅವರು ಪರಮೇಶ್ವರ್ ಶೀಘ್ರವೇ ಸಿಎಂ ಆಗುತ್ತಾರೆ ಎಂದು ಭವಿಷ್ಯ ವಾಣಿ ನುಡಿದಿದ್ದಾರೆ.
ಗೃಹ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಡಾ. ನಾಗಣ್ಣ ಅವರಿಗೆ ಕಾರ್ಣಿಕ ಭವಿಷ್ಯ ನುಡಿದು ಭಂಡಾರವನ್ನು ನೀಡಿ ಆಶೀರ್ವಾದ ಮಾಡಿದ್ದಾರೆ. ಮೈಲಾರ ದೇವರ ಗೊರವಯ್ಯ ನುಡಿದ ಕಾರ್ಣಿಕ ಭವಿಷ್ಯ ನಿಜವಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.