ಹುಮನಾಬಾದ : ಸಂಸತ್ತಿನಲ್ಲಿ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯನ್ನು ಖಂಡಿಸಿ ಡಿಸೇಂಬರ್ 24ರಂದು ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಹುಮನಾಬಾದ್ ಬಂದ್ ಗೆ ಕರೆ ನೀಡಲಾಗಿದ್ದು ಅದರಲ್ಲಿ ಹೆಚ್ಚಿನ ಜನರು ಭಾಗವಹಿಸಬೇಕು ಎಂದು ದಲಿತ ಮುಖಂಡ ಬಾಬು ಟೈಗರ್ ತಿಳಿಸಿದರು. ಭಾನುವಾರ ಮಾಧ್ಯಮ ಜೊತೆಗೆ ಮಾತನಾಡಿದ ಅವರು ಕೇಂದ್ರ ಸರ್ಕಾರದ ಉನ್ನತ ಹುದ್ದೆಯಲ್ಲಿ ಇರುವ ಅಮಿತ್ ಶಾ ಅಂಬೇಡ್ಕರ್ ಕುರಿತು ಅವಹೇಳನ ಮಾಡಿದ್ದು ಸಹಿಸಲಾಗುವುದಿಲ್ಲ. ದಯವಿಟ್ಟು ಅಂಬೇಡ್ಕರ್ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದ್ ಕರೆ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಮೇಶ ಡಾಕುಳಗಿ, ಲಕ್ಷ್ಮಿಪುತ್ರ ಮಾಳಗೆ,ಗಣಪತಿ ಅಷ್ಟೂರೆ,ಕೈಲಾಸ ಮೇಟಿ, ಸುರೇಶ ಗಾಂಗ್ರೆ ಸೇರಿ ಅನೇಕ ದಲಿತ ಪರ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಸಜೀಶ ಲಂಬುನೋರ್