ಚಿಟಗುಪ್ಪ:ಮಾಜಿ ಸಚಿವ ರಾಜಶೇಖರ್ ಬಿ.ಪಾಟೀಲ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು,ಗೌಡರ ಅಭಿಮಾನಿಗಳು ಸಕ್ರಿಯವಾಗಿ ಭಾಗವಹಿಸಬೇಕೆಂದು ಮಾಜಿ ತಾಲ್ಲೂಕು ಪಂಚಾಯತ ಸದಸ್ಯ ಶ್ರೀಮಂತ ಪಾಟೀಲ ಮನವಿ ಮಾಡಿದರು.
ತಾಲ್ಲೂಕಿನ ತಾಳಮಡುಗಿ ಗ್ರಾಮದಲ್ಲಿ ಮಂಗಳವಾರ ಮಾಧ್ಯಮ ಜೊತೆಗೆ ಮಾತನಾಡಿದ ಶ್ರೀಮಂತ ಪಾಟೀಲ,
ಹಮನಾಬಾದ ಪಟ್ಟಣದ ರಾಜರಾಜೇಶ್ವರಿ ದೇವಸ್ಥಾನ ಆವರಣದಲ್ಲಿ ಏಪ್ರಿಲ್ 2ರಂದು ಮಾಜಿ ಸಚಿವ ರಾಜಶೇಖರ್ ಪಾಟೀಲ ಅವರ ಜನ್ಮದಿನ ಕಾರ್ಯಕ್ರಮ ಆಯೋಜಿಸಲಾಗಿದೆ.ನಾಳೆ ಸಂಜೆ ನಡೆಯುವ ಬ್ರಹತ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು,ಹಿತೈಷಿಗಳು, ಅಭಿಮಾನಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪ್ರಕಾಶ ವಣಕೇರಿ,ಶಂಭುಲಿಂಗ ಪಾಟೀಲ,ಸುನಿಲ ಸಾಹೇಬ್,ಕಲ್ಲಪ್ಪ ಸೇರಿಕಾರ,ವೈಜೀನಾಥ ನಿಂಪೆನ್ನಿ,ಸುನಿಲ ಹಿಲಾಲಪುರ ಇದ್ದರು.