ಸೇಡಂ: 2023-24 ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಮೈಕ್ರೋ (ಅಕ್ಷರ ಆವಿಷ್ಕಾರ) ಯೋಜನೆ ಅಡಿಯಲ್ಲಿ ಸೇಡಂ ತಾಲೂಕಿನ ಇಟಕಲ್ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನವಾಗಿ ಅಂದಾಜು ಮೊತ್ತ 60 ಲಕ್ಷ ರೂಗಳಲ್ಲಿ ನಿರ್ಮಿಸಲಾದ 4 ಕೋಣೆಗಳನ್ನು ಸೇಡಂ ತಾಲೂಕಿನ ಶಾಸಕರು ಹಾಗೂ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಕ್ಷರ ಆವಿಷ್ಕಾರ ಯೋಜನೆ ಅಡಿಯಲ್ಲಿ ತಾಲೂಕಿನ ಶೈಕ್ಷಣಿಕ ಪ್ರಗತಿಗೆ ವಿಶೇಷ ಅನುದಾನ ಬಿಡುಗಡೆಗೊಳಿಸಿ, ಸರಕಾರಿ ಶಾಲಾ ಕೋಣೆಗಳ ಅಭಿವೃದ್ಧಿಯಲ್ಲಿ ಹೆಚ್ಚು ಕಾಳಜಿ ವಹಿಸಲಾಗಿದೆ
ಸೇಡಂ ತಾಲೂಕಿನ ಇಟಕಲ್ ಗ್ರಾಮದಲ್ಲಿ ಅತಿಹೆಚ್ಚು ಸರಕಾರಿ ನೌಕರಸ್ಥರು ಹೊಂದಿರುವುದು ತಾಲೂಕಿಗೆ ಹೆಮ್ಮೆಯ ಸಂಗತಿಯಾಗಿದ್ದು, ಗ್ರಾಮದಲ್ಲಿ ಪ್ರಸ್ತುತ ಶಾಲಾ ಕೋಣೆಗಳ ಅಭಿವೃದ್ಧಿಪಡಿಸಿ ಮತ್ತಷ್ಟು ಶೈಕ್ಷಣಿಕ ಸಾಧನೆ ತೋರಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಇಟಕಲ್ ಗ್ರಾಮದ ಮುಖಂಡರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




