Ad imageAd image

ಮಗನ ಅಂಗಾಂಗ ದಾನ ಮಾಡುವ ಮೂಲಕ ಮಾದರಿಯಾದ ಕುಟುಂಬ

Bharath Vaibhav
ಮಗನ ಅಂಗಾಂಗ ದಾನ ಮಾಡುವ ಮೂಲಕ ಮಾದರಿಯಾದ ಕುಟುಂಬ
WhatsApp Group Join Now
Telegram Group Join Now

ಬೆಂಗಳೂರು: ಅಪಘಾತವೊಂದರಲ್ಲಿ ಮಗನನ್ನು ಕಳೆದುಕೊಂಡ ಪೋಷಕರು ಅತೀವ ದುಃಖದಲ್ಲಿಯೂ ತಮ್ಮ ಮಗನ ಅಂಗಾಂಗ ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಭೀಕರ ರಸ್ತೆ ಅಪಘಾತದಲ್ಲಿ 28 ವರ್ಷದ ಯುವಕ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ನಾಗರಭಾವಿಯ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದರಿಂದ ಆತನ ಮಿದುಳು ನಿಷ್ಕ್ರಿಯಗೊಂಡಿತ್ತು. ಬಳಿಕ ವೈದ್ಯರು ಆಂಗಾಂಗ ದಾನದ ಕುರಿತು ಕುಟುಂಬಕ್ಕೆ ಸಲಹೆ ನೀಡಿದ್ದಾರೆ. ಇದಕ್ಕೆ ಕುಟುಂಬ ಒಪ್ಪಿಗೆ ನೀಡಿದೆ.

ಬಹುಅಂಗ ಮರುಪಡೆಯುವಿಕೆಯ ಸಂಪೂರ್ಣ ಪ್ರಕ್ರಿಯೆಯು ಸುಮಾರು 5 ಗಂಟೆಗಳನ್ನು ತೆಗೆದುಕೊಂಡಿತು. ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಎಂಟು ಮಂದಿಗೆ ಅಂಗಾಂಗಗಳನ್ನು ಜೋಡಣೆ ಮಾಡಲಾಗಿದ್ದು, 8 ಮಂದಿಗೆ ಜೀವ ನೀಡಿದೆ. ಎರಡೂ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ, ಎರಡೂ ಶ್ವಾಸಕೋಶಗಳನ್ನು ಮಣಿಪಾಲ್ ಆಸ್ಪತ್ರೆಗೆ, ಯಕೃತ್ತನ್ನು ಎಚ್ಸಿಜಿ ಆಸ್ಪತ್ರೆಗೆ, ಹೃದಯ ಕವಾಟಗಳನ್ನು ಮಣಿಪಾಲ್ ಆಸ್ಪತ್ರೆಗೆ ಮತ್ತು ಒಂದು ಮೂತ್ರಪಿಂಡವನ್ನು ರಾಮಯ್ಯ ಆಸ್ಪತ್ರೆಗೆ ದಾನ ಮಾಡಲಾಯಿತು ಎಂದು ಆಸ್ಪತ್ರೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಏಳು ವರ್ಷಗಳಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ 41 ವರ್ಷದ ಮಹಿಳೆ ಬಳಲುತ್ತಿದ್ದು, ನಾಗರಭಾವಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಎರಡನೇ ಮೂತ್ರಪಿಂಡವನ್ನು ಕಸಿ ಮಾಡಲಾಯಿತು.

ಶ್ವಾಸಕೋಶ ಮತ್ತು ಹೃದಯ ಕವಾಟಗಳನ್ನು ತಕ್ಷಣವೇ ಹಸಿರು ಕಾರಿಡಾರ್ ಮೂಲಕ ಫೋರ್ಟಿಸ್ ಆಸ್ಪತ್ರೆ, ಮತ್ತು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಯಿತು ಎಂದು ತಿಳಿಸಿದೆ.

WhatsApp Group Join Now
Telegram Group Join Now
Share This Article
error: Content is protected !!