ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾಗೌಡ ಬರೋಬ್ಬರಿ 6 ತಿಂಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ ಆಗಿದ್ದಾರೆ.ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಸೇರಿದ್ದ ಪವಿತ್ರಾಗೌಡ, ಕೊಲೆ ಪ್ರಕರಣದ ಎ1 ಆರೋಪಿಯಾಗಿದ್ದಾರೆ.
ಆದರೆ ಜಾಮೀನು ಪ್ರತಿ ತಡವಾಗಿ ಜೈಲಿಗೆ ತಲುಪಿದ ಹಿನ್ನೆಲೆ ನಿನ್ನೆ ಪವಿತ್ರಾಗೌಡ ರಿಲೀಸ್ ಆಗಿರಲಿಲ್ಲ, . ಜೈಲಿನ ನಿಯಮಾವಳಿ ಪ್ರಕಾರ ಜಾಮೀನು ಪ್ರತಿ ತಲುಪಿಸಲು ಸಂಜೆ 6 ಗಂಟೆ ಡೆಡ್ ಲೈನ್ ಆಗಿತ್ತು. ಇದೀಗ ಕೊನೆಗೂ ಪವಿತ್ರಾಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪರಪ್ಪನ ಅಗ್ರಹಾರದಿಂದ ಬಿಡುಗಡೆ ಆಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು ಆಗಿದೆ. ನಟ ದರ್ಶನ್ ಸೇರಿ 7 ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನಟ ದರ್ಶನ್, ಪವಿತ್ರಾಗೌಡ, ನಾಗರಾಜು, ಅನುಕುಮಾರ್, ಜಗದೀಶ್, ಲಕ್ಷ್ಮಣ್, ಪ್ರದೋಶ್ ರಾವ್ ಸೇರಿದಂತೆ 7 ಆರೋಪಿಗಳಿಗೂ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.