Ad imageAd image

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ : ಕೈ ಕೊಯ್ದುಕೊಂಡು ಡ್ರಾಮ್

Bharath Vaibhav
ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ : ಕೈ ಕೊಯ್ದುಕೊಂಡು ಡ್ರಾಮ್
WhatsApp Group Join Now
Telegram Group Join Now

ಮೈಸೂರು : ಜಿಲ್ಲೆಯ ಹುನ್ಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ.

ಪಿಡಿಓ ಮಂಜುಳಾ ಅವರು ನೀರುಗಂಟಿ ಮಹದೇವ್ ಎಂಬುವವರಿಂದ ₹25,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ಮಂಜುಳಾ ಅವರನ್ನು ರೆಡ್‌ಹ್ಯಾಂಡ್‌గా ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆತಂಕದಿಂದ ಅಧಿಕಾರಿಗಳ ಮುಂದೆಯೇ ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮಹದೇವ್ ಅವರ ತಂದೆ ಸ್ವಾಮಿ ಅವರು ಸೇವೆಯಲ್ಲಿದ್ದಾಗಲೇ ನಿಧನರಾಗಿದ್ದು, ಅನುಕಂಪದ ಆಧಾರದ ಮೇಲೆ ಮಹದೇವ್ ಅವರಿಗೆ ಅದೇ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ದೊರೆತಿತ್ತು.

ಆದರೆ, ಮೃತ ಸ್ವಾಮಿ ಅವರಿಗೆ ಬಾಕಿಯಾಗಿದ್ದ ಸುಮಾರು ₹2 ಲಕ್ಷ ಸಂಬಳ ಬಿಡುಗಡೆ ಮಾಡಲು ಮಂಜುಳಾ ಅವರು 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಬಗ್ಗೆ ಮಹದೇವ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೂರ್ವನಿಯೋಜಿತ ಕಾರ್ಯಾಚರಣೆ ರೂಪಿಸಲಾಯಿತು. ಅದರಂತೆ ಮೊದಲ ಕಂತಾಗಿ 25,000 ಹಣ ನೀಡುವ ವೇಳೆ ಅಧಿಕಾರಿಗಳು ದಾಳಿ ನಡೆಸಿದರು.

ಕಾರ್ಯಾಚರಣೆಯ ವೇಳೆ ಗಾಬರಿಗೊಂಡ ಮಂಜುಳಾ, ಕಚೇರಿಯಲ್ಲಿದ್ದ ಹರಿತವಾದ ವಸ್ತುವಿನಿಂದ ಕೈ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳು ಮಂಜುಳಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಪಿಡಿಓ ಅಧಿಕಾರಿ ಮಂಜುಳಾ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!