ಬೆಂಗಳೂರು : ನಿವೇಶನದ ಖಾತೆ ಮಾಡಲು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 1 ಲಕ್ಷ ರೂ, ಲಂಚ ಸ್ವೀಕರಿಸುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಯುಟ್ಯೂಬರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ, ಹಾಗೂ ಸ್ಥಳೀಯ ಖಾಸಗಿ ವಾಹಿನಿ ಪ್ರತಿನಿಧಿ ಗಂಗಾಧರ್ ಒಂದು ಲಕ್ಷ ರೂ.ಲಂಚದ ಹಣದ ಸಮೇತ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪಿಡಿಓ ಗೀತಾಮಣಿ ಅವರು 1,50,000 ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಈ ಹಣವನ್ನು ಯುಟ್ಯೂಬರ್ ಗಂಗಾಧರ್ ಗೆ ನೀಡುವಂತೆ ಸೂಚಿಸಿದ್ದರು. ಈ ವಿಚಾರವನ್ನು ಗೀತಾಮಣಿ, ಗಂಗಾಧರ್ಗೆ ಹೇಳಿದ್ದರು.
ಡೀಲ್ ನಂತೆ ಫೈಜಲ್ ನಿಂದ ಗಂಗಾಧರ್ 1,20,000 ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಅಧಿಕಾರಿಗಳು ಪಿಐ ಉಮಾ ಮಹೇಶ್, ಹಾಗೂ ಎಸ್ ಪಿ ಮಹಾಂತೇಶ್ವರ ಜಿದ್ದಿ ತಂಡ ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸದ್ಯ ಗೀತಾಮಣಿ ಹಾಗೂ ಗಂಗಾಧರ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.




