Ad imageAd image

ನಾನು ಮುಖ್ಯಮಂತ್ರಿಯಾಗಬೇಕು ಎಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ : ಡಿಸಿಎಂ 

Bharath Vaibhav
ನಾನು ಮುಖ್ಯಮಂತ್ರಿಯಾಗಬೇಕು ಎಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ : ಡಿಸಿಎಂ 
DKS
WhatsApp Group Join Now
Telegram Group Join Now

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಬೇಕು ಎಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೆ ಮಾಧ್ಯಮದವರಿಗೂ ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ ಸಮಯವೇ ಉತ್ತರ ನೀಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಆಗಬೇಕು ಎಂಬ ಆಸೆ ಎಲ್ಲರಿಗೂ ಇದೆ.ನಾನು ಸಿಎಂ ಆಗಬೇಕು ಎಂಬ ಕನಸು ಜನರಿಗೆ, ಶಾಸಕರಿಗೆ ಎಲ್ಲರಿಗೂ ಇದೆ. ಆದರೆ ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು ಎಂದರು.

ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆಯಾಗಲಿದೆ ಎಂಬ ಚರ್ಚೆ ನಡೆದಿತ್ತು ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ, ಸಮಯವೇ ಉತ್ತರ ನೀಡಲಿದೆ ಎಂದು ಹೇಳಿದರು.

ಇನ್ನು ಮೆಟ್ರೋ ಪ್ರಯಾಣ ದರ ಹೆಚ್ಚಳದ ವಿಚಾರವಾಗಿ, ಮೆಟ್ರೋ ದರದ ಬಗ್ಗೆ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಇದರ ಮುಖ್ಯಸ್ಥರು. ಮೆಟ್ರೋ ದರ ಏರಿಕೆ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಮೆಟ್ರೋ ದರದ ವಿಚಾರವಾಗಿ ನಾನು ಬೆಂಗಳೂರಿಗೆ ಮರಳಿದ ಬಳಿಕ ಈ ಬಗ್ಗೆ ಚರ್ಚೆ ಮಾಡುವೆ. ಜನರಿಗೆ ತೊಂದರೆ ನೀಡಲು ನಮಗೆ ಇಷ್ಟವಿಲ್ಲ. ಆರ್ಥಿಕ ಸ್ಥಿತಿಗತಿ ಪರಿಶೀಲನೆ ಮಾಡುತ್ತೇನೆ ಎಂದು ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!