ನವದೆಹಲಿ: ವಿದ್ಯುನ್ಮಾನ ಮತ ಯಂತ್ರದಲ್ಲಿ ದಾಖಲಾಗಿರುವ ಮತಗಳು ಮತ್ತು ವಿವಿಪ್ಯಾಟ್ ಚೀಟಿಗಳಲ್ಲಿ ಶೇಕಡಾ 100ರಷ್ಟು ತಾಳೆ ನೋಡಲು ನಿರ್ದೇಶನ ನೀಡುವಂತೆ ಕೋರಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ವಿದ್ಯುನ್ಮಾನ ಮತ ಯಂತ್ರಗಳ ಬದಲಿಗೆ ಹಳೆಯ ಬ್ಯಾಲಟ್ ಪೇಪರ್ ಪದ್ಧತಿ ಜಾರಿ ಮಾಡುವಂತೆ ಕೋರಲಾಗಿದ್ದ ಮನವಿಗಳನ್ನು ಕೂಡ ಸುಪ್ರೀಂ ಕೋರ್ಟ್ ಸಾರಸಗಟಾಗಿ ತಿರಸ್ಕರಿಸಿದೆ.
ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಾಂಕರ್ ದತ್ತ ಅವರನ್ನೊಳಗೊಂಡ ಪೀಠ ಶುಕ್ರವಾರ ಪರಸ್ಪರ ಸಹಮತದ ಅವಳಿ ತೀರ್ಪು ಪ್ರಕಟಿಸಿದೆ. ಉಭಯ ತೀರ್ಪುಗಳಲ್ಲಿಯೂ ದೇಶದ ಚುನಾವಣೆ ವ್ಯವಸ್ಥೆಯಲ್ಲಿ ಆಗಿರುವ ಸುಧಾರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.
ಹಾಲಿ ವ್ಯವಸ್ಥೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ಅನಗತ್ಯ ಅನುಮಾನ ಮತ್ತು ಸಿನಿಕತನದ ಬಗ್ಗೆ ಕಿಡಿಕಾರಿದೆ. ಬ್ಯಾಲೆಟ್ ಪೇಪರ್ ಪದ್ದತಿಗೂ ನಿರಾಕರಿಸಿದ್ದು, ಚುನಾವಣಾ ಆಯೋಗಕ್ಕೆ ಹಲವು ನಿರ್ದೇಶನ ನೀಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದವರಿಗೆ ಸುಪ್ರೀಂ ಕೋರ್ಟ್ ಕಪಾಳಮೋಕ್ಷ ಮಾಡಿದೆ ಎಂದು ಹೇಳಿದ್ದಾರೆ.