Ad imageAd image

ರಾಜ್ಯಾದ್ಯಂತ ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ಹಾಳೆ ನಿಷೇಧ

Bharath Vaibhav
ರಾಜ್ಯಾದ್ಯಂತ ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ಹಾಳೆ ನಿಷೇಧ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಸರ್ಕಾರದಿಂದ ಜನರ ಆರೋಗ್ಯ ರಕ್ಷಣೆಗಾಗಿ ಮಹತ್ವದ ತುರ್ತ ಕ್ರಮ ಕೈಗೊಂಡಿದೆ. ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ಹಾಳೆ ನಿಷೇಧ ಮಾಡಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಎಲ್ಲಾ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ.

ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ. ಇನ್ಮುಂದೆ ಆಹಾರ ತಯಾರಿಕೆ, ವಿತರಣೆ ವೇಳೆ ಪ್ಲಾಸ್ಟಿಕ್ ಬಳಸಬಾರದು. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಅಧಿಕೃತ ಸುತ್ತೋಲೆ ಹೊರಡಿಸಲಾಗುವುದು ಅಂತ ತಿಳಿಸಿದ್ದಾರೆ.

ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್​ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರು ಸೇವಿಸುವ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಆರೋಗ್ಯಕ್ಕೆ ಮಾರಕ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ಹೇಳಿದ್ದಾರೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!