Ad imageAd image

ಮಂಡ್ಯದಲ್ಲಿ ಭೈರವೈಕ್ಯ ಮಂದಿರ’ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

Bharath Vaibhav
ಮಂಡ್ಯದಲ್ಲಿ ಭೈರವೈಕ್ಯ ಮಂದಿರ’ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ
WhatsApp Group Join Now
Telegram Group Join Now

ಮಂಡ್ಯ: ಜಿಲ್ಲೆಯ ಪವಿತ್ರ ಕ್ಷೇತ್ರವಾದ ಆದಿಚುಂಚನಗಿರಿಯಲ್ಲಿ ಇಂದು ಐತಿಹಾಸಿಕ ಕ್ಷಣವೊಂದು ದಾಖಲಾಯಿತು. ಆದಿಚುಂಚನಗಿರಿ ಮಠದ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಏಪ್ರಿಲ್ 15, 2026) ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು.

ಮಂದಿರವನ್ನು ಉದ್ಘಾಟಿಸಿದ ನಂತರ, ಪ್ರಧಾನಿಗಳು ಡಾ. ಬಾಲಗಂಗಾಧರನಾಥ ಸ್ವಾಮೀಜಿಗಳ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಠದ ಪ್ರಸ್ತುತ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!