Ad imageAd image

ದೆಹಲಿ ಸ್ಫೋಟದ ಹಿಂದಿನ ಸಂಚುಕೋರರನ್ನು ಬಿಡುವುದಿಲ್ಲ : ಪ್ರಧಾನಿ ಮೋದಿ 

Bharath Vaibhav
ದೆಹಲಿ ಸ್ಫೋಟದ ಹಿಂದಿನ ಸಂಚುಕೋರರನ್ನು ಬಿಡುವುದಿಲ್ಲ : ಪ್ರಧಾನಿ ಮೋದಿ 
MODI
WhatsApp Group Join Now
Telegram Group Join Now

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಭೂತಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, “ಇಂದು ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ.

ನಿನ್ನೆ ಸಂಜೆ ದೆಹಲಿಯಲ್ಲಿ ನಡೆದ ಭಯಾನಕ ಘಟನೆ ಎಲ್ಲರಿಗೂ ತೀವ್ರ ದುಃಖ ತಂದಿದೆ. ಸಂತ್ರಸ್ತ ಕುಟುಂಬಗಳ ದುಃಖವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇಡೀ ದೇಶ ಇಂದು ಅವರೊಂದಿಗೆ ನಿಂತಿದೆ.

ಕಳೆದ ರಾತ್ರಿಯಿಡೀ ಈ ಘಟನೆಯ ತನಿಖೆ ನಡೆಸುತ್ತಿರುವ ಎಲ್ಲಾ ಏಜೆನ್ಸಿಗಳೊಂದಿಗೆ ನಾನು ಸಂಪರ್ಕದಲ್ಲಿದ್ದೆ. ನಮ್ಮ ಏಜೆನ್ಸಿಗಳು ಈ ಪಿತೂರಿಯ ತಳಕ್ಕೆ ಹೋಗುತ್ತವೆ. ಇದರ ಹಿಂದಿನ ಸಂಚುಕೋರರನ್ನು ಬಿಡುವುದಿಲ್ಲ. ಇದಕ್ಕೆ ಕಾರಣರಾದವರೆಲ್ಲರನ್ನೂ ನ್ಯಾಯದ ಕಟಕಟೆಗೆ ತರಲಾಗುವುದು” ಎಂದಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!