Ad imageAd image

ಪ್ರಧಾನಿ ಮೋದಿ ಟೆರರಿಸ್ಟ್ : ಖರ್ಗೆ ವಿವಾದಾತ್ಮಕ ಹೇಳಿಕೆ 

Bharath Vaibhav
ಪ್ರಧಾನಿ ಮೋದಿ ಟೆರರಿಸ್ಟ್ : ಖರ್ಗೆ ವಿವಾದಾತ್ಮಕ ಹೇಳಿಕೆ 
mallikarjun kharge
WhatsApp Group Join Now
Telegram Group Join Now

ಚೆನ್ನೈ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯಾವಾಗಲೂ ಒಂದು ವಿವಾದದ ಹೇಳಿಕೆ ನೀಡುತ್ತಲೇ ಇರುತ್ತಾರೆ. ಇದೀಗ ಚೆನ್ನೈನಲ್ಲಿ ಚುನಾವಣಾ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆ ವಿವಾದಿತ ಹೇಳಿಕೆ ನೀಡಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟೆರರಿಸ್ಟ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಚೆನ್ನೈನಲ್ಲಿ ಚುನಾವಣಾ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದು, ನರೇಂದ್ರ ಮೋದಿ ಟೆರರಿಸ್ಟ್ ಮೋದಿ, AIADMK ಜೊತೆಗೆ ಹೇಗೆ ಕೈಜೋಡಿಸುತ್ತದೆ? ಮೋದಿ ಭಯೋತ್ಪಾದಕ. ನ್ಯಾಯದಲ್ಲಿ ನಂಬಿಕೆ ಇಲ್ಲ ಎಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಈ ಹೇಳಿಕೆ ಇದೀಗ ವಿವಾದ ಸೃಷ್ಟಿಸಿದೆ.

ಇನ್ನು ಈ ವಿಚಾರವಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟನೆ ನೀಡಿದ್ದು, ಮೋದಿ ಭಯೋತ್ಪಾದಕ ಎಂದು ನಾನು ಹೇಳಲಿಲ್ಲ ಅವರು ಭಯಭೀತಗೊಳಿಸುತ್ತಿದ್ದಾರೆ ಎಂದು ನಾನು ಹೇಳಿದ್ದೇನೆ. ಅವರ ಅಧೀನದಲೇ ಐಟಿ, ಇಡಿ ಸೇರಿ ಎಲ್ಲಾ ಸಂಸ್ಥೆಗಳು ಇವೆ ಆ ಸಂಸ್ಥೆಗಳ ಮೂಲಕ ಬೆದರಿಕೆ ಹಾಕುತ್ತಾರೆ ಎಂದು ಹೇಳಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಚೆನ್ನೈನಲ್ಲಿ ಈ ವಿಚಾರವಾಗಿ ಸ್ಪಷ್ಟಪಡಿಸಿದರು.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!