Ad imageAd image

ಪೋಕ್ಸೋ ಪ್ರಕರಣ : ಇಂದು ಯಡಿಯೂರಪ್ಪ ವಿರುದ್ಧ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ

Bharath Vaibhav
ಪೋಕ್ಸೋ ಪ್ರಕರಣ : ಇಂದು ಯಡಿಯೂರಪ್ಪ ವಿರುದ್ಧ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ
BSY
WhatsApp Group Join Now
Telegram Group Join Now

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾದ ದೂರು ರದ್ದು ಮತ್ತು ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ, ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ಗುರುವಾರ ಹೈಕೋರ್ಟ್ ನಲ್ಲಿ ನಡೆಯಲಿದೆ.

ಯಡಿಯೂರಪ್ಪ ಅವರ ಅರ್ಜಿಗಳ ಸಂಬಂಧಿಸಿದಂತೆ ಮಂಗಳವಾರ ಕೆಲವು ಕಾಲ ವಾದ -ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ವಿಚಾರಣೆಯನ್ನು ಗುರುವಾರ ಮಧ್ಯಾಹ್ನ 3:30ಕ್ಕೆ ಮುಂದೂಡಿತ್ತು. ಇಂದು ಮಧ್ಯಾಹ್ನ ವಿಚಾರಣೆ ನಡೆಯಲಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!