Ad imageAd image

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಪೊಲೀಸರ ರಕ್ಷಣೆ : ಜಿ. ಪರಮೇಶ್ವರ್ 

Bharath Vaibhav
ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಪೊಲೀಸರ ರಕ್ಷಣೆ : ಜಿ. ಪರಮೇಶ್ವರ್ 
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಪೊಲೀಸರು ರಕ್ಷಣೆ ನೀಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.

ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ‘ಹಿರಿಯ ಅಧಿಕಾರಿಗಳ ವಾರ್ಷಿಕ ಸಮ್ಮೇಳನ’ದಲ್ಲಿ ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್ ಅವರು, ಇತ್ತೀಚೆಗೆ ಧಾರವಾಡ ಜಿಲ್ಲೆಯಲ್ಲಿ ನಡೆದಿದ್ದ ಆರು ತಿಂಗಳ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು.

ಮದುವೆ ಮುನ್ನ ತಮ್ಮ ಕುಟುಂಬದವರಿಂದಲೇ ಅನ್ಯಜಾತಿಯುವತಿ ಅಥವಾ ಯುವಕ ಜೀವ ಎದುರಿಸುತ್ತಾರೆ.

ಅಂಥವರು ರಕ್ಷಣೆ ಕೋರಿ ಬಗ್ಗೆ ಸ್ಥಳೀಯ ಪೊಲೀಸರಿಗೆ ದೂರು ನೀಡಿ ದಲ್ಲಿ ಇಂಥ ದೂರುಗಳ ಬಗ್ಗೆ ಪೊಲೀಸರು ನಿರ್ಲಕ್ಷ್ಯ ವಹಿಸಬಾರದು. ಬೆದರಿಕೆಯಿಂದ ನಲುಗಿದವರಿಗೆ ಭದ್ರತೆ ಕಲ್ಪಿಸಬೇಕು ಎಂದು ಸಚಿವರು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲಿನ ದಲಿತರ ಮೇಲಿನ ದೌರ್ಜನ್ಯ ತಡೆಗೆ ನಾಗರಿಕ ಹಕ್ಕು ಜಾರಿ ನಿರ್ದೇ ಶನಾಲಯದ (ಡಿಸಿಆರ್‌ಇ) ಠಾಣೆಗಳನ್ನು ಸ್ಥಾಪಿಸಲಾಗಿದೆ. ಆದರೆ ಶೋಷಿತರ ರಕ್ಷಣೆಗೆ ಪೊಲೀಸರು ದಕ್ಷತೆಯಿಂದ ಕೆಲಸ ಮಾಡುತ್ತಿಲ್ಲ. ಅಂತರ್ಜಾತಿ ವಿವಾಹಗಳ ಬಗ್ಗೆ ಡಿಸಿಆರ್‌ಇ ಪೊಲೀಸರು ಗಮನಹರಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!