ಅಥಣಿ : ಐಗಳಿ ಪೊಲೀಸ್ ಪಿಎಸ್ಐ ಚಂದ್ರು ಸಾಗನೂರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿರುವ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಥಣಿ ತಾಲೂಕಿನ ಬಾಡಗಿ ಗ್ರಾಮದಿಂದ ಕಕಮರಿ ಕಡೆಗೆ ರಾಜು ಬಸರಗಿ ಎಂಬ ವ್ಯಕ್ತಿಯಿಂದ ಮಾರುತಿ ಸುಜುಕಿ ಇಕೋ ವಾಹನ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿ ಹಾಗೂ ಪೊಲೀಸರು ವಶಪಡಿಸಿಕೊಂಡ ಘಟನೆ ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಾರುತಿ ಸುಜುಕಿ ಇಕೋ ವಾಹನದಲ್ಲಿ 12 ಚೀಲಗಳಲ್ಲಿ 7 ಕ್ವಿಂಟಲ್ ಪಡಿತರ ಅಕ್ಕಿಯನ್ನು ಸಾಗಿಸುವ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ka 71/m-2666 ನಂಬರಿನ ವಾಹನ ಮತ್ತು ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಐಗಳಿ ಪೊಲೀಸ್ ಠಾಣೇಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಅಜಯ ಕಾಂಬಳೆ




