ಬೆಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರೊಬ್ಬರ ಪುತ್ರನನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಮಾಡಿ ಬಂಧಿಸಿದ್ದಾರೆ.
ಉಪನ್ಯಾಸಕ ಜೆ.ಸಿ.ಅಶ್ವತ್ಥ್ ಅವರ ಪುತ್ರ ನಿಶ್ಚಿತ್(13) ಹತ್ಯೆಯಾದ ಬಾಲಕ. ಟ್ಯೂಷನ್ ಗೆ ಹೋಗಿ ಮರಳುವಾಗ ಗುರುವಾರ ಸಂಜೆ 7:30ಕ್ಕೆ ಆತನನ್ನು ಅಪಹರಿಸಿದ ದುಷ್ಕರ್ಮಿಗಳು ಬನ್ನೇರುಘಟ್ಟ ರಸ್ತೆಯ ಸಮೀಪ ಕತ್ತು ಸೀಳಿ ಕೊಲೆ ಮಾಡಿ ಶವಕ್ಕೆ ಬೆಂಕಿ ಹಚ್ಚಿದ್ದಾರೆ.
ಬಾಲಕ ಮನೆಗೆ ಬಾರದಿದ್ದಾಗ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೋಷಕರಿಗೆ ಕರೆ ಮಾಡಿದ್ದ ಅಪಪಹರಣಕಾರರು ಹಣಕ್ಕೆ ಒತ್ತಾಯಿಸಿದ್ದರು. ಆದರೆ, ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚುವ ವೇಳೆಗೆ ಕೊಲೆ ಮಾಡಿದ್ದಾರೆ.
ಇನ್ನು ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ 6 ಸುತ್ತು ಫೈರಿಂಗ್ ಮಾಡಿ ವಶಕ್ಕೆ ಪಡೆಯಲಾಗಿದೆ.
ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ಸ್ಪೆಕ್ಟರ್ ಕುಮಾರಸ್ವಾಮಿ ಮತ್ತು ಪಿಎಸ್‌ಐ ಅರವಿಂದ ಕುಮಾರ್ ಫೈರಿಂಗ್ ಮಾಡಿದ್ದಾರೆ. ಆತ್ಮ ರಕ್ಷಣೆಗಾಗಿ ಫೈರಿಂಗ್ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.




