Ad imageAd image

ರಾಹುಲ್ ಗಾಂಧಿ ಮಾಡಿರುವ ಆರೋಪ ಸುಳ್ಳಾದರೆ ರಾಜಕೀಯ ನಿವೃತ್ತಿ : ಪ್ರಿಯಾಂಕ್ ಖರ್ಗೆ ಸವಾಲು 

Bharath Vaibhav
ರಾಹುಲ್ ಗಾಂಧಿ ಮಾಡಿರುವ ಆರೋಪ ಸುಳ್ಳಾದರೆ ರಾಜಕೀಯ ನಿವೃತ್ತಿ : ಪ್ರಿಯಾಂಕ್ ಖರ್ಗೆ ಸವಾಲು 
PRIYANKA KHARGE
WhatsApp Group Join Now
Telegram Group Join Now

ಬೆಂಗಳೂರು : ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಸವಾಲು ಹಾಕಿದ್ದು ರಾಹುಲ್ ಗಾಂಧಿಯವರು ಮಾಡಿರುವ ಮತಗಳ್ಳತನದ ದಾಖಲೆಗಳನ್ನು ಸುಳ್ಳು ಎಂದು ಸಾಬೀತಪಡಿಸಿದರೆ, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸವಾಲು ಹಾಕಿದರು.

ಬೆಂಗಳೂರಲ್ಲಿ ಮಾತನಾಡಿದ ಅವರು, ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತಗಳನ್ನು ಬಗ್ಗೆ ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡಿದ್ದಾರೆ.

ಐದು ರೀತಿಯಲ್ಲಿ ಮತಗಳ್ಳತನ ಆಗಿದೆ ಎಂದು ರಾಹುಲ್ ಗಾಂಧಿಯವರು ಹೇಳಿದ್ದಾರೆ ಹೀಗಾಗಿ ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ನಾವು ಕೊಟ್ಟಿರುವ ದಾಖಲೆಗಳನ್ನು ಪರಿಶೀಲನೆ ಮಾಡದೆ ಚುನಾವಣಾ ಆಯೋಗ ಮತ್ತು ಬಿಜೆಪಿ ಸುಳ್ಳು ಎಂದು ಹೇಳುತ್ತಿದೆ.

ನಾವು ಸಾವಿರಾರು ದಾಖಲೆಗಳನ್ನು ಬಿಡುಗಡೆ ಮಾಡಿದ್ದೇವೆ. ಅದನ್ನು ಪರಿಚಯ ಮಾಡಿ ಕರ್ತವ್ಯ ಮಾಡುವುದನ್ನು ಬಿಟ್ಟು, ರಾಹುಲ್ ಗಾಂಧಿ ವಿರುದ್ಧ ಆರೋಪ ಮಾಡಿದರೆ ಹೇಗೆ? ನಾವು ಸತ್ಯ ಎಂದು ಹೇಳಿ ದಾಖಲೆ ಬಿಡುಗಡೆ ಮಾಡಿದ್ದೇವಲ್ಲ. ಸುಳ್ಳು ಎಂದು ನೀವು ಸಾಬೀತು ಮಾಡಿ ಬಿಜೆಪಿ ಮತ್ತು ಜೆಡಿಎಸ್ ಸುಳ್ಳು ಎಂದು ಸಾಬೀತು ಮಾಡಲಿ ಆಗ ನಾನೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!