ವ್ಯಾಟಿಕನ್ ಸಿಟಿ : ಕ್ಯಾಥಲಿಕ್ ಕ್ರಿಶ್ಚಿಯನ್ಸ್ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಶನಿವಾರ ವ್ಯಾಟಿಕನ್ ಸಿಟಿಯಲ್ಲಿ ನಡೆಯಲಿದೆ.
ಕ್ರೈಸ್ತ ವಿಧಿವಿಧಾನಗಳ ಪ್ರಕಾರ ಸೆಂಟ್ ಪೀಟರ್ಸ್ ಬ್ಯಾಸಿಲಿಕಾ ಎದುರು 10.00 ಗಂಟೆಗೆ (ವ್ಯಾಟಿಕನ್ ಸಿಟಿಯ ಸಮಯದ ಪ್ರಕಾರ) ಅವರ ಅಂತ್ಯಕ್ರಿಯೆ ನಡೆಯಲಿದ್ದು, ಜಾಗತಿಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಸೋಮವಾರ ಪೋಪ್ ಫ್ರಾನ್ಸಿಸ್ ಮೃತಪಟ್ಟಿದ್ದರು. ಇಂದಿನವರೆಗೂ ಅವರ ಅಂತಿಮ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ ನೀಡಲಾಗಿತ್ತು. ಭಾರತದಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು, ಹಾಗೂ ರಾಜ್ಯ ಸರ್ಕಾರದ ಪರವಾಗಿ ಸಚಿವ ಕೆ.ಜೆ.ಜಾರ್ಜ್ ಮತ್ತು ಐವಾನ್ ಡಿಸೋಜಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಫ್ರಾನ್ಸಿಸ್ ಅವರು ಬದುಕಿರುವಾಗಲೇ ತಮ್ಮ ಅಂತಿಮ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ವ್ಯಾಟಿಕನ್ ಸಿಟಿಯಿಂದ ಹೊರಗಿರುವ ಸೆಂಟ್ ಬೆಸಲಿಕಾದಲ್ಲಿ ತಮ್ಮ ಸಮಾಧಿಯನ್ನು ನಿರ್ಮಿಸಬೇಕೆಂಬುದು ಅವರ ಇಚ್ಛೆಯಾಗಿತ್ತು.