Ad imageAd image

ಪ್ರಜ್ವಲ್ ಅವರೂ ಅರೆಸ್ಟ್ ಆಗಲೇಬೇಕು : ಪ್ರಹ್ಲಾದ್ ಜೋಶಿ

Bharath Vaibhav
JOSHI
WhatsApp Group Join Now
Telegram Group Join Now

ಹುಬ್ಬಳ್ಳಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರೂ ಅರೆಸ್ಟ್ ಆಗಲೇಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಕಿಡ್ನ್ಯಾಪ್ ಕೇಸ್ ನಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಬಂಧನವಾಗಿದೆ.ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣನನ್ನೂ ಬಂಧಿಸಿ ತನಿಖೆ ನಡೆಸಬೇಕು ಎಂದರು.

ಪ್ರಜ್ವಲ್ ರೇವಣ್ಣ ಅವರೂ ಅರೆಸ್ಟ್ ಆಗಬೇಕು. ಅವರನ್ನು ಬಂಧಿಸಿ ಸರಿಯಾದ ತನಿಖೆಗೊಳಪಡಿಸಬೇಕು. ಹಲವಾರು ಮಹಿಳೆಯರು ಪ್ರಜ್ವಲ್ ವಿರುದ್ಧ ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ. ತಸ್ಥರ ವಿರುದ್ಧ ಕ್ರಠಿಣ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಲೇಬೇಕು ಎಂದು ಹೇಳಿದರು.

WhatsApp Group Join Now
Telegram Group Join Now
Share This Article
error: Content is protected !!