ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ರಾಜಕೀಯ ವಿಪ್ಲವಗಳು ಸಂಭವಿಸುತ್ತಿದ್ದು,ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬೆಂಕಿ ಹೊಗೆಯಾಡುತ್ತಿದ್ದರೆ ಇತ್ತ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯ ಜಟಾಪಟಿ ಜೋರಾಗಿದೆ.
ರಾಜ್ಯಾಧ್ಯಕ್ಷರ ಸ್ಥಾನದಲ್ಲಿ ವಿಜಯೇಂದ್ರ ಮುಂದುವರೆಯಲಿದ್ದಾರೋ ಇಲ್ಲವೋ ಎಂಬ ಗೊಂದಲಕ್ಕೆ ಇದುವರೆಗೂ ಹೈಕಮ್ಯಾಂಡ್ ಸ್ಪಷ್ಟ ಉತ್ತರ ನೀಡಿಲ್ಲ.
ಈ ಮಧ್ಯೆ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಚುನಾವಣೆಯ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆಯಾಗಲಿದೆ ಎಂದು ಹೇಳಿದ್ದಾರೆ.
ಈ ಆರು ತಿಂಗಳ ಹಿಂದೆ ಯಾರೇ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದರೂ ಇದೀಗ ಚುನಾವಣೆಯ ಮೂಲಕವೇ ಆ ಸ್ಥಾನಕ್ಕೆ ನಾಯಕರನ್ನು ಆಯ್ಕೆ ಮಾಡಲಾಗುವುದು, ಆಯ್ಕೆ ಪ್ರಕ್ರಿಯೆ ಕೊಂಚ ವಿಳಂಬವಾಗಿದೆ ಅಷ್ಟೇ ಎಂದಿದ್ದಾರೆ.
ಇನ್ನು ಇದೇ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಜೋಶಿ, ಸಿಎಂ ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ರಾಜ್ಯ ಸರ್ಕಾರ ಸಂಪೂರ್ಣವಾಗಿ ಆಡಳಿತದ ಮೇಲಿನ ನಿಯಂತ್ರಣ ಕಳೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.




