ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಆರೋಪದಡಿ ಬಂಧಿತರಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಒಂದು ಪ್ರಕರಣದಲ್ಲಿ ಜಾಮೀನು, ಇನ್ನೆರಡು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಪ್ರಜ್ವಲ್ ಕೋರಿದ್ದರು.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಅವರು ಜಾಮೀನು ಕೋರಿದ್ದಾರೆ. ಸಿಐಡಿ ಸೈಬರ್ ಸೆಲ್ ನಲ್ಲಿ ದಾಖಲಾದ ಮತ್ತೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದಾರೆ.