ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಕ್ಕೆ ಸಂಬಂಧಿಸಿದಂತೆ ಜಾಮೀನು, ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಮುಂದೂಡಿಕೆಯಾಗಿದೆ.
ಸಂತ್ರಸ್ತೆಯ ಗುರುತು ಮರೆಮಾಚಲು ಇನ್ ಕೆಮರಾ ವಿಚಾರಣೆ ( ಮುಚ್ಚಿದ ಕೊಠಡಿ) ವಿಚಾರಣೆಗೆ ಹೈಕೋರ್ಟ್ ಗೆ ಎಸ್ ಪಿಪಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಲಿದ್ದಾರೆ ಎಂದು ನ್ಯಾಯಾಧೀಶರು ಪ್ರತಿಕ್ರಿಯೆ ನೀಡಿ ವಿಚಾರಣೆಯನ್ನು ಸೆ.5 ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.